fbpx
ಸಮಾಚಾರ

ಕಂಚಿ ಮಠಕ್ಕೆ ತಮ್ಮ ಮನೆಯನ್ನು ದಾನ ಮಾಡಿದ ಎಸ್‍ಪಿಬಿ!

ಖ್ಯಾತ ಗಾಯಕ ಎಸ್‌.ಪಿ ಬಾಲಸುಬ್ರಹ್ಮಣ್ಯಂ ಅವರು ಆಂಧ್ರಪ್ರದೇಶದ ನೆಲ್ಲೂರಿನಲ್ಲಿದ್ದ ತಮ್ಮ ಪೂರ್ವಜರ ಆಸ್ತಿಯನ್ನು ಕಂಚಿಕಾಮಕೋಟಿ ಪೀಠಕ್ಕೆ ಉಡುಗೊರೆಯಾಗಿ ನೀಡಿದ್ದಾರೆ. ಸಂಸ್ಕೃತ ಮತ್ತು ವೇದಾಧ್ಯಯನ ಶಾಲೆ ನಡೆಸುವ ಕಂಚಿ ಮಠದ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಅವರಿಗೆ ತಮ್ಮ ಹಿರಿಯರ ಮನೆಯನ್ನು ಹಸ್ತಾಂತರಿಸಿದರು.

ಈ ಹಿಂದೆ ಎಸ್‍ಪಿಬಿ ಅವರು ಆಂಧ್ರ ಪ್ರದೇಶದ ನೆಲ್ಲೂರ್ ನಲ್ಲಿರುವ ತಮ್ಮ ಮನೆಯನ್ನು ದಾನ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ ಈಗ ಕಂಚಿ ಮಠಕ್ಕೆ ಮನೆಯನ್ನು ದಾನ ಮಾಡಿದ್ದಾರೆ. ಆ ಮನೆಯಲ್ಲಿ ಸಂಸ್ಕೃತ ಹಾಗೂ ವೇದ ಪಾಠ ಶಾಲೆ ಮಾಡಬೇಕು ಎಂಬುದು ಎಸ್‍ಪಿಬಿ ಅವರ ಆಸೆ ಎಂದು ತಿಳಿದು ಬಂದಿದೆ.

ದೇವರ ಹಾಗೂ ಧಾರ್ಮಿಕ ವಿಚಾರಗಳ ಬಗ್ಗೆ ಎಸ್‍ಪಿಬಿ ಅವರು ಹೆಚ್ಚು ಆಸಕ್ತಿ ಹೊಂದಿದ್ದಾರೆ. ಅಲ್ಲದೆ ಎಸ್‍ಪಿಬಿ ಅವರಿಗೆ ಸಂಸ್ಕೃತ ಮೇಲೆ ಸಾಕಷ್ಟು ಪ್ರೀತಿ ಇದೆ. ಹಾಗಾಗಿ ಒಂದು ಒಳ್ಳೆಯ ಉದ್ದೇಶಕ್ಕಾಗಿ ಎಸ್‍ಪಿಬಿ ತಮ್ಮ ಮನೆಯನ್ನು ದಾನ ಮಾಡಿದ್ದಾರೆ. ಈ ವಿಷಯ ತಿಳಿದ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top