fbpx
ಸಮಾಚಾರ

KSRTCಯಲ್ಲಿ ಭರ್ಜರಿ ನೇಮಕಾತಿ; 3745 ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ!

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮದಲ್ಲಿ ಖಾಲಿ ಇರುವ ಚಾಲಕ ಮತ್ತು ಚಾಲಕ ಕಮ್ ಕಂಡಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 1200 ಚಾಲಕ ಹಾಗೂ 2545 ಚಾಲಕ ಕಮ್ ಕಂಡಕ್ಟರ್ ಒಟ್ಟು 3745 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ದಿನಾಂಕ 20 ಮಾರ್ಚ್ 2020ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ವಿದ್ಯಾರ್ಹತೆ:
ಚಾಲಕ ಚಾಲಕ ಕಮ್ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಮುಕ್ತ ವಿವಿಯಿಂದ ಪಡೆದ ಎಸ್‌ಎಸ್‌ಸಿ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದಿಲ್ಲ.

ಇತರೆ ಅರ್ಹತೆಗಳು:
ಚಾಲ್ತಿಯಲ್ಲಿರುವ ಭಾರಿ ಸರಕು ಸಾಗಾಣಿಕೆ ವಾಹನ (HTV) ಚಾಲನಾ ಪರವಾನಿಗೆ ಹೊಂದಿ ಕನಿಷ್ಠ 2 ವರ್ಷಗಳಾಗಿರಬೇಕು. ಪ್ರಯಾಣಿಕರ ಭಾರಿ ವಾಹನ ಚಾಲನಾ ಪರವಾನಿಗೆ ಹಾಗೂ ಕರ್ನಾಟಕ ಪಿಎಸ್‌ವಿ ಬ್ಯಾಡ್ಜ್‌ ಹೊಂದಿರಬೇಕು.

ವಯೋಮಿತಿ:
ವಯೋಮಿತಿ ಮತ್ತು ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಕನಿಷ್ಟ 24 ರಿಂದ ಪರಿ‍ಶಿಷ್ಟ ಜಾತಿ,ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ, ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕ:
ಸಾಮಾನ್ಯ/ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ₹500 ಹಾಗೂ ಪ.ಜಾತಿ, ಪ.ಪಂಗಡ. ಪ್ರವರ್ಗ-1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹250 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಹೆಚ್ಚಿನ ಮಾಹಿಗಾಗಿ ಅಧಿಸೂಚನೆಯ ಲಿಂಕ್‌: https://ksrtcjobs.karnataka.gov.in/docs/Notification%201-2020%20Dt%2014-02-2020%20DR%20DCC.pdf

ಹುದ್ದೆಗೆ ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ: https://ksrtc.in

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top