fbpx
ಸಮಾಚಾರ

“ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಪಾಕ್ ಏಜೆಂಟ್” ಸಂಸದ ಯತ್ನಾಳ್ ವಿವಾದಾತ್ಮಕ ಹೇಳಿಕೆ

ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌ ದೊರೆಸ್ವಾಮಿ ಪಾಕಿಸ್ತಾನದ ಏಜೆಂಟ್‌ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಗರ ಪಾತ್ರವಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಎಚ್‌. ಎಸ್‌ ದೊರೆಸ್ವಾಮಿ ವಿರುದ್ಧ ವಿವಾದಾತ್ಮಕ ಮಾತನ್ನಾಡಿದರು. “ದೊರೆಸ್ವಾಮಿ ನಕಲಿ ಸ್ವಾತಂತ್ರ್ಯ ಹೋರಾಟಗಾರ, ಪಾಕಿಸ್ತಾನದ ಏಜೆಂಟ್‌ ರೀತಿಯಲ್ಲಿ ವರ್ತಿಸುತ್ತಾರೆ, ಈ ಮುತ್ಯಾ ಎಲ್ಲಿದ್ದಾನೆ” ಎಂದು ಏಕವಚನದಲ್ಲಿ ಮನಬಂದಂತೆ ಮಾತಾಡಿದ್ದಾರೆ.

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮೋದಿ, ಅಮಿತ್ ಶಾ ಪಾಲ್ಗೊಂಡಿದ್ದಾರೆಯೇ ಎಂದು ಪ್ರಶ್ನಿಸುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ ಯತ್ನಾಳ, ಸೋನಿಯಾ ಗಾಂಧಿ, ಸಿದ್ಧರಾಮಯ್ಯ ಇವರೇನು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡಿದ್ದರೆ? ಅಟಲ್ ಬಿಹಾರಿ ವಾಜಪೇಯಿ ಅವರಂಥ ನಾಯಕರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡಿರಲಿಲ್ಲವೇ ಎಂದು ಪ್ರಶ್ನಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top