fbpx
ಸಮಾಚಾರ

ದೆಹಲಿ ಹಿಂಸಾಚಾರ: ‘ಶಾಂತಿ ಕಾಪಾಡಿ,. ಭ್ರಾತೃತ್ವ ಮರೆಯದಿರಿ‘ – ಪ್ರಧಾನಿ ಮೋದಿ ಟ್ವೀಟ್!

ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ಕಿಚ್ಚಿಗೆ ರಾಷ್ಟ್ರ ರಾಜಧಾನಿಯೇ ಹೊತ್ತಿ ಉರಿಯುತ್ತಿದೆ. ದೆಹಲಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಟ್ವೀಟ್ ಮಾಡಿದ್ದಾರೆ.

ದೆಹಲಿ ಹಿಂಸಾಚಾರ ಸಂಬಂಧ ಸರಣಿ ಟ್ವೀಟ್​ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ನಮ್ಮ ದೇಶದ ಶಾಂತಿ ಮತ್ತು ಸಾಮರಸ್ಯ ಕಾಪಾಡಬೇಕಿದೆ. ದೆಹಲಿಯ ನನ್ನ ಸೋದರ, ಸೋದರಿಯರೇ ದಯವಿಟ್ಟು ಸಹನೆಯಿಂದ ಇರಿ. ಯಾವುದೇ ಸಂದರ್ಭ ಬಂದರೂ ಭ್ರಾತೃತ್ವ ಕಾಪಾಡಿಕೊಳ್ಳಬೇಕು. ಆದಷ್ಟು ಬೇಗ ದೆಹಲಿ ಸಹಜಸ್ಥಿತಿಗೆ ಮರಳಬೇಕಿದೆ ಎಂದು ಹೇಳಿದ್ದಾರೆ.

 

 

ದೆಹಲಿಯ ನನ್ನ ಸಹೋದರ, ಸಹೋದರಿಯರೇ ದಯವಿಟ್ಟು ಎಲ್ಲಾ ಸಮಯದಲಲ್ಲೂ ಶಾಂತಿ ಮತ್ತು ಭ್ರಾತೃತ್ವವನ್ನು ಕಾಪಾಡಬೇಕು. ದೆಹಲಿಯಲ್ಲಿ ಶೀಘ್ರವೇ ಸಹಜ ಸ್ಥಿತಿ ಮರಳುವುದಕ್ಕೆ ಇದು ತುಂಬಾ ಮುಖ್ಯ ಎಂದು ದೆಹಲಿ ಜನತೆಯಲ್ಲಿ ಕೇಳಿಕೊಂಡಿದ್ದಾರೆ.

 

 

ದೆಹಲಿಯ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ನಿಗಾ ವಹಿಸಲಾಗಿದೆ. ಪರಿಸ್ಥಿತಿ ನಿಯಂತ್ರಿಸಿ, ಶಾಂತಿ ಮರು ಸ್ಥಾಪಿಸಲು ದೆಹಲಿ ಪೊಲೀಸರು, ಭದ್ರತಾ ಸಿಬ್ಬಂದಿ ಪ್ರಯತ್ನ ಪಡುತ್ತಿದ್ದಾರೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಕಳೆದ ಮೂರು ದಿನಗಳಿಂದಲೂ ಈಶಾನ್ಯ ದೆಹಲಿಯಲ್ಲಿ ಸಿಎಎ ಪರ-ವಿರೋಧಿ ಬಣಗಳ ನಡುವೆ ಸಂಘರ್ಷ ಭುಗಿಲೆದ್ದಿದ್ದು, ಹಿಂಸಾಚಾರಕ್ಕೆ ತಲುಪಿದೆ. 20 ಮಂದಿ ಸಾವನ್ನಪ್ಪಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಭಾರತಕ್ಕೆ ಆಗಮಿಸಿದ ಸಂದರ್ಭದಲ್ಲಿಯೇ ಇತ್ತ ಪ್ರತಿಭಟನಾಕಾರರ ಸಂಘರ್ಷವೂ ಹೆಚ್ಚಿತ್ತು. ನಿನ್ನೆಯವರೆಗೂ ಅಮೆರಿಕ ಅಧ್ಯಕ್ಷರ ಜತೆ ದ್ವಿಪಕ್ಷೀಯ ಮಾತುಕತೆ, ಸಭೆಗಳಲ್ಲಿ ತೊಡಗಿಕೊಂಡಿದ್ದ ಪ್ರಧಾನಿ ಮೋದಿ ಇದೀಗ ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top