fbpx
ಸಮಾಚಾರ

2 ಗಂಟೆ ತಡವಾಗಿದ್ರೆ ಕೆಟ್ಟ ಅಪಾಯ ಎದುರಿಸಬೇಕಿತ್ತು: ಜನ್ಯ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಿದ ವೈದ್ಯರ ತಂಡ

ಮ್ಯಾಜಿಕಲ್ ಮ್ಯೂಸಿಕ ಕಂಪೋಸರ್ ಅರ್ಜುನ್ ಜನ್ಯ ಅವರು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿರುವ ವೈದ್ಯರು, 2 ಗಂಟೆ ತಡವಾಗಿದ್ರೆ ಕೆಟ್ಟ ಪರಿಣಾಮ ಎದುರಿಸಬೇಕಿತ್ತು ಎಂದು ಹೇಳಿದರು. ಅರ್ಜುನ್​ ಜನ್ಯ ಅವರ ಆರೋಗ್ಯ ಈಗ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಪೋಲೋ ಆಸ್ಪತ್ರೆಯ ವೈದ್ಯರು ಸುದ್ದಿಗೋಷ್ಠಿ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ.

ಅಪೋಲೋ ಹೃದ್ರೋಗ ತಜ್ಞ ಆದಿತ್ಯ ಉಡುಪ ಪ್ರತಿಕ್ರಿಯಿಸಿ, ಭಾನುವಾರ ಅರ್ಜುನ್ ಜನ್ಯ ಅವರು ಗ್ಯಾಸ್ಟ್ರಿಕ್, ತಲೆ ನೋವು, ಎದೆ ನೋವು ಹಾಗೂ ಬೆನ್ನು ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಆಗ ನಾವು ಅವರಿಗೆ ಚಿಕಿತ್ಸೆ ನೀಡಿದಾಗ ಅವರ ಗ್ಯಾಸ್ಟ್ರಿಕ್ ಸಮಸ್ಯೆ ಸರಿ ಹೋಯಿತು. ಮಂಗಳವಾರ ರಾತ್ರಿ ಮತ್ತೆ ಅವರಿಗೆ ಇಸಿಜಿ ಮಾಡಿಸಿದಾಗ ವರದಿಯಲ್ಲಿ ಕೆಲವು ವ್ಯತ್ಯಾಸಗಳು ಕಂಡು ಬಂತು. ಅಲ್ಲದೆ ಅರ್ಜುನ್ ಅವರಿಗೆ ಬೆನ್ನು, ಎದೆ ಹಾಗೂ ತಲೆ ನೋವು ಜಾಸ್ತಿಯಾಗಿತ್ತು. ಹಾಗಾಗಿ ಮತ್ತೆ ಇಸಿಜಿ ಮಾಡಿಸಿದ್ದೇವು ಎಂದರು.

ಹಾರ್ಟ್ ಪ್ರಾಬ್ಲಂಗೆ ಸಂಬಂಧಪಟ್ಟ ಚಿಕಿತ್ಸೆ ನೀಡಿದ್ದೇವೆ. ಸರಿಯಾದ ಸಮಯಕ್ಕೆ ಆಂಜಿಯೋಗ್ರಫಿ, ಆಂಜಿಯೋಪ್ಲಾಸ್ಟಿ ಮಾಡಿದ್ದೇವೆ. ಅರ್ಜುನ್ ಜನ್ಯ ಆರೋಗ್ಯ ಇದೀಗ ಸ್ಥಿರವಾಗಿದೆ. ಗಾಬರಿ ಪಡುವಂಥದ್ದು ಏನೂ ಇಲ್ಲ. ನಿಜವಾಗಿಯೂ 2 ಗಂಟೆ ತಡವಾಗಿದ್ರೆ ಕೆಟ್ಟ ಪರಿಣಾಮ ಎದುರಿಸಬೇಕಿತ್ತು. ಸದ್ಯ ಎಲ್ಲವು ಸರಿಯಾಗಿದೆ. ಚಿಕಿತ್ಸೆ ಪಡೆದು ಅವರನ್ನು ವಾರ್ಡ್ ಗೆ ಶಿಫ್ಟ್ ಮಾಡಿದ್ದೇವೆ. ಸದ್ಯಕ್ಕೆ ಅರ್ಜುನ್ ಜನ್ಯ ಕ್ಷೇಮವಾಗಿದ್ದಾರೆ ಎಂದು ಹೃದ್ರೋಗ ತಜ್ಞ ಆದಿತ್ಯ ಉಡುಪ ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top