fbpx
ಸಮಾಚಾರ

ಮಹಿಳಾ ಟಿ20 ವಿಶ್ವಕಪ್: ಸೆಮಿಫೈನಲ್ ಪ್ರವೇಶ ಪಡೆದ ಟೀಂ ಇಂಡಿಯಾ!

ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮಹಿಳಾ ತಂಡ ಗೆಲುವಿನ ನಾಗಾಲೋಟ ಮುಂದುವರಿಸಿದೆ. ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಣಿಸಿದ ಭಾರತ, 2ನೇ ಪಂದ್ಯದಲ್ಲಿ ಬಾಂಗ್ಲಾದೇಶ ಮಟ್ಟಹಾಕಿತ್ತು. ಇದೀಗ ಬಲಿಷ್ಠ ನ್ಯೂಜಿಲೆಂಡ್‌ ವಿರುದ್ಧ 4 ರನ್‌ಗಳ ರೋಚಕ ಜಯ ದಾಖಲಿಸಿ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಸತತ ಎರಡನೇ ಬಾರಿ ಸೆಮಿಫೈನಲ್‌ ತಲುಪಿದೆ.

 

 

ಮೆಲ್ಬರ್ನ್ ನಲ್ಲಿ ಮಹಿಳೆಯರ ಟಿ20 ವಿಶ್ವಕಪ್ ಭಾಗವಾಗಿ ನ್ಯೂಜಿಲೆಂಡ್ ವಿರುದ್ಧ ಗುರುವಾರ ನಡೆದ ನಡೆದ ಪಂದ್ಯದಲ್ಲಿ ಭಾರತದ ಕೊನೆಯ ಓವರಿನಲ್ಲಿ ಗೆದ್ದು ಬೀಗಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ 8 ವಿಕೆಟ್‍ಗೆ 133 ರನ್ ಗಳಿಸಿತ್ತು. ಆದರೆ ನ್ಯೂಜಿಲೆಂಡ್ ತಂಡವು 6 ವಿಕೆಟ್‍ಗೆ 130 ರನ್ ಗಳಿಸಿ ಮೂರು ರನ್ನುಗಳ ಸೋಲು ಕಂಡಿತು. ಭಾರತದ ಪರ 46 ರನ್ ಗಳಿಸಿದ ಶಫಾಲಿ ವರ್ಮಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಮಹಿಳೆಯರ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಮಹಿಳಾ ತಂಡಕ್ಕೆ ಇದು ಸತತ ಮೂರನೇ ಜಯವಾಗಿದೆ. ಭಾರತವು ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 17 ರನ್‍ಗಳಿಂದ ಮತ್ತು ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 18 ರನ್‍ಗಳಿಂದ ಮಣಿಸಿತ್ತು. ಅಲ್ಲದೆ ಹಾಲಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮೀಸ್ ಲಗ್ಗೆ ಇಟ್ಟ ಮೊದಲ ತಂಡ ಎಂಬ ಕೀರ್ತಿಗೂ ಭಾರತ ಭಾಜನವಾಯಿತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top