fbpx
ಸಮಾಚಾರ

ಯಡಿಯೂರಪ್ಪ ಹುಟ್ಟುಹಬಕ್ಕೆ ಕೇಂದ್ರದಿಂದ ಭರ್ಜರಿ ಗಿಫ್ಟ್!

ಕುಡಿಯುವ ನೀರಿಗಾಗಿ ಹೋರಾಟ ಮಾಡುತ್ತಿದ್ದ ಉತ್ತರ ಕರ್ನಾಟಕ ಜನರ ದಾಹ ತಣಿಸುವ ಕಾಲ ಬಂದಿದೆ. ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಕೊನೆಗೂ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇದರ ಅನ್ವಯ ಕರ್ನಾಟಕ ಮಹದಾಯಿ ನದಿಯಿಂದ 13.05 ಟಿಎಂಸಿ ನೀರು ಬಳಸಬಹುದಾಗಿದೆ. ಕೇಂದ್ರದ ನಿರ್ಧಾರದಿಂದ ಉತ್ತರ ಕರ್ನಾಟಕ ಭಾಗಕ್ಕೆ ಅದರಲ್ಲೂ ಮಹದಾಯಿ ಅಚ್ಚುಕಟ್ಟು ವ್ಯಾಪ್ತಿಯ ಜನಕ್ಕೆ ಸಿಹಿ ಸುದ್ದಿ ಸಿಕ್ಕಂತಾಗಿದೆ.

ಸುಪ್ರೀಂ ಕೋರ್ಟಿಗೆ ಹೆಚ್ಚುವರಿ ನೀರಿಗೆ ಆಗ್ರಹಿಸಿ ಕರ್ನಾಟಕ ಗೋವಾ ಮತ್ತು ಮಹಾರಾಷ್ಟ್ರ ಅರ್ಜಿ ಸಲ್ಲಿಸಿರುವ ಹಿನ್ನಲೆ ಕೋರ್ಟಿನ ಅಂತಿಮ ತೀರ್ಪಿಗೆ ಒಳಪಟ್ಟು ಅಧಿಸೂಚನೆ ಹೊರಡಿಸಲಾಗಿದೆ. ಇದರಿಂದಾಗಿ ರಾಜ್ಯಕ್ಕೆ ಹಂಚಿಕೆಯಾಗಿದ್ದ 13.5 ಟಿಎಂಸಿ ನೀರನ್ನು ನಿರಾತಂಕವಾಗಿ ಬಳಸಿಕೊಳ್ಳಬಹುದಾಗಿದೆ. ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಅನುಮತಿ ಪಡೆದು ನದಿ ಕಣಿವೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಯೋಜನೆಗಳ ಕಾಮಗಾರಿ ಮತ್ತು ಜಲ ವಿದ್ಯುತ್ ಯೋಜನೆಗಳ ಕಾಮಗಾರಿ ಆರಂಭಿಸಬಹುದಾಗಿದೆ.

ಜಲವಿದ್ಯುತ್ ಯೋಜನೆಗೂ ಕೇಂದ್ರ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಕಳಸಾ ಯೋಜನೆಗೆ 1.72 ಟಿಎಂಸಿ, ಬಂಡೂರಿಗೆ 2.18 ಟಿಎಂಸಿ ನೀರು ಹಂಚಿಕೆ ಮಾಡಲಾಗಿದೆ. ಕುಡಿಯುವ ನೀರಿಗಾಗಿ 3.98 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿದೆ.

ತೀರ್ಪಿನ ಅಧಿಸೂಚನೆ ಹೊರಡಿಸಲು ಕಾನೂನಾತ್ಮಕ ವಾಗಿ ಯಾವುದೇ ಅಡ್ಡಿ ಇರದಿದ್ದರೂ ಕೇಂದ್ರ ಸರ್ಕಾ ರವು ಈ ತೀರ್ಪನ್ನು ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿಯಿದೆ ಎಂಬ ನೆಪ ಹೇಳಿ ತ್ತು. ಆದರೆ ಇದೇ ಫೆ.20ರಂದು ಸುಪ್ರೀಂ ಕೋರ್ಟ್ ನ್ಯಾಯಾಧಿಕರಣದ ಐತೀರ್ಪಿನ ಅಧಿಸೂಚನೆ ಹೊರಡಿ ಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಇದಾದ ವಾರದೊಳಗೆ ಈಗ ಅಧಿಸೂಚನೆ ಹೊರಬಿದ್ದಿದೆ.

ರಾಜ್ಯದ ಮನವಿಗೆ ಓಗೊಟ್ಟು ರೈತಪರ, ಉತ್ತರ ಕರ್ನಾಟಕದ ಅಭಿವೃದ್ಧಿಪರ ಸದಾ ಚಿಂತಿಸುವ ಬಿಎಸ್​ವೈ ಅವರಿಗೆ ಪ್ರಧಾನಿ ನೀಡಿದ ಜನ್ಮದಿನದ ಉಡುಗೊರೆಯಾಗಿದ್ದು, ಇನ್ನೇನಿದ್ದರೂ ಯೋಜನೆಯ ಅನುಷ್ಠಾನ, ರೈತರ ಕನಸಿನ ಸಾಕಾರ ಎಂದು ಬಿವೈ ವಿಜಯೇಂದ್ರ ಅವರು ತಿಳಿಸಿದ್ದಾರೆ!

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top