fbpx
ಸಮಾಚಾರ

ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್

ಲಘು ಹೃದಯಾಘಾತದಿಂದ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನೆನ್ನೆ ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಎದೆ ನೋವು, ಹೊಟ್ಟೆ ನೋವು, ಬೆನ್ನು ನೋವು ಕಾಣಿಸಿಕೊಂಡ ಹಿನ್ನಲೆ ಅರ್ಜುನ್ ಜನ್ಯ ಕಳೆದ ಭಾನುವಾರ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ವೈದ್ಯರು ಪ್ರಾಥಮಿಕ ಆ್ಯಂಜಿಯೋಪ್ಲಾಸ್ಟಿಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿ ವಾರ್ಡ್‌ಗೆ ಸ್ಥಳಾಂತರಿಸಿದ್ದರು. ಇದೀಗ ಆರೋಗ್ಯ ಸುಧಾರಿಸಿದ್ದರಿಂದ ಡಿಸ್ಚಾಜ್‌ರ್‍ ಮಾಡಲಾಗಿದ್ದು, 15 ದಿನಗಳ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ ಎಂದು ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ಇದೇ ಮಂಗಳವಾರ ಅತಿಯಾದ ಗ್ಯಾಸ್ಟ್ರಿಕ್ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ಬಂದಿದ್ದರು. ಆಗ ಹೃದಯ ಪರೀಕ್ಷೆ ನಡೆಸಿದ್ದಾಗ ಹೃದಯಾಘಾತವಾಗಿರುವುದು ಸ್ಪಷ್ಟವಾಗಿತ್ತು. ಅವರ ಹೃದಯ ಶೇಕಡಾ 99 ರಷ್ಟು ಬ್ಲಾಕ್ ಇತ್ತು. ಹೀಗಾಗಿ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಸ್ಟಂಟ್ ಅಳವಡಿಸಿದ್ದರು. ಅಲ್ಲದೇ ಇನ್ನೆರಡು ಘಂಟೆ ತಡವಾಗಿದ್ದರೂ ಅಪಾಯ ಸಂಭವಿಸುವ ಸಾಧ್ಯತೆಯೂ ಇತ್ತು ಎಂದು ವೈದ್ಯರು ತಿಳಿಸಿದ್ದರು.

ಮೂರು ದಿನಗಳ ಪರೀಕ್ಷೆ ನಂತರ ಇವತ್ತು ಅರ್ಜುನ್ ಜನ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಎರಡು ತಿಂಗಳು ಸಂಪೂರ್ಣ ವಿಶ್ರಾಂತಿ ತೆಗೆದು ಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ. ಹೀಗಾಗಿ ಎರಡು ತಿಂಗಳು ಸಿನಿಮಾ ಕೆಲಸ ಹಾಗೂ ರಿಯಾಲಿಟಿ ಶೋ ಗಳಿಂದ ಅರ್ಜುನ್ ಜನ್ಯ ದೂರ ಉಳಿಯಲಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top