fbpx
ಸಮಾಚಾರ

ಸುಪ್ರೀಂಕೋರ್ಟ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ನೋಟಿಸ್.

2019ರ ಲೋಕಸಭಾ ಚುನಾವಣೆ ವೇಳೆ ಆಯೋಗಕ್ಕೆ ಸುಳ್ಳು ಪ್ರಮಾಣ ಪತ್ರ ನೀಡಿದ್ದಾರೆನ್ನಲಾದ ಪ್ರಕರಣದಲ್ಲಿ ಸಂಸದ ಪ್ರಜ್ವಲ್​ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದ್ದು ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಪ್ರಜ್ವಲ್​ ರೇವಣ್ಣ ಸುಳ್ಳು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ಹಾಸನ ಬಿಜೆಪಿ ಅಭ್ಯರ್ಥಿ ಮತ್ತು ವಕೀಲ ದೇವರಾಜೇಗೌಡ ಹೈಕೋರ್ಟ್​ನಲ್ಲಿ ದಾವೆ ಹೂಡಿದ್ದರು. ಪ್ರಜ್ವಲ್ ರೇವಣ್ಣ ಸಂಸದ ಸ್ಥಾನವನ್ನು ಅಸಿಂಧುಗೊಳಿಸುವಂತೆ ಕೋರಿ ಬಿಜೆಪಿ ನಾಯಕ ಎ. ಮಂಜು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. 2020ರ ಜನವರಿಯಲ್ಲಿ ಹೈಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿತ್ತು.

ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿಗಳಾದ ಗಾನವಿ ಮತ್ತು ಸೂರ್ಯಕಾಂತ್​ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿ ಪ್ರಜ್ವಲ್ ರೇವಣ್ಣಗೆ ನೋಟಿಸ್ ಜಾರಿಗೊಳಿಸಲಾಗಿದೆ!

ಹಾಸನದಲ್ಲಿರೋ ಕಲ್ಯಾಣ ಮಂಟಪ ಮತ್ತು ಮಾಜಿ ಪ್ರಧಾನಿ ದೇವೇಗೌಡರ ಬಳಿ ಪಡೆದಿರೋ ಸಾಲದ ಬಗ್ಗೆ ಮುಚ್ಚಿಟ್ಟಿದ್ದಾರೆ ಎಂದು ಎ.ಮಂಜು ಆರೋಪಿಸಿದ್ದರು. “ಅಫಿಡವಿಟ್ ಸಲ್ಲಿಸುವಾಗ​ ಚೆನ್ನಾಂಬಿಕಾ ಕನ್ವೆನ್ಷನ್ ಹಾಲ್ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ. ಅಲ್ಲದೇ ತಾತ ಹೆಚ್​.ಡಿ ದೇವೇಗೌಡ ಸಾಲ ನೀಡಿದ ಬಗ್ಗೆಯೂ ಉಲ್ಲೇಖಿಸಿಲ್ಲ. ಆದರೆ, ದೇವೇಗೌಡರು ತುಮಕೂರಿನಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಮೊಮ್ಮಗ ಪ್ರಜ್ವಲ್​ಗೆ 26 ಲಕ್ಷ ರೂ. ಸಾಲ ನೀಡಿರುವುದಾಗಿ ಉಲ್ಲೇಖಿಸಿದ್ದಾರೆ. ಆದರೆ, ಪ್ರಜ್ವಲ್ ರೇವಣ್ಣ ಸಲ್ಲಿಸಿದ ಅಫಿಡವಿಟ್‌ನಲ್ಲಿ ಈ ಸಾಲ ಪಡೆದ ಬಗ್ಗೆ ಮಾಹಿತಿಯನ್ನೇ ನೀಡಿಲ್ಲ.” ಎಂದು ಎ.ಮಂಜು ಆರೋಪಿಸಿದ್ದರು!

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top