fbpx
ಸಮಾಚಾರ

ಆರೋಗ್ಯದಲ್ಲಿ ಏರುಪೇರು: ಖಾಸಗಿ ಆಸ್ಪತ್ರೆಗೆ ದಾಖಲಾದ ನಟ ದರ್ಶನ್!

ನಟ ದರ್ಶನ್​ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಹೋಗಿದ್ದಾರಂತೆ. ಮೈಸೂರಿನಲ್ಲಿದ್ದ ಅವರಿಗೆ ಇದ್ದಕ್ಕಿದ್ದಂತೆ ಹೊಟ್ಟೆನೋವು ಕಾಣಿಸಿಕೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ!

ಸಿನಿಮಾ ಶೂಟಿಂಗ್ ಕಾರಣದಿಂದ ಸರಿಯಾದ ಸಮಯಕ್ಕೆ ಊಟ ಮಾಡದ ಕಾರಣ ಅವರಿಗೆ ಗ್ಯಾಸ್ಟ್ರಿಕ್​ ಸಮಸ್ಯೆಯಾಗಿರಬಹುದು ಎನ್ನಲಾಗುತ್ತಿದೆ. ಅತಿಯಾದ ಗ್ಯಾಸ್ಟ್ರಿಕ್​ಸಮಸ್ಯೆಯಿಂದಾಗಿ ದರ್ಶನ ಅವರಿಗೆ ಹೊಟ್ಟನೋವು ಕಾಣಿಸಿಕೊಂಡಿದ್ದು ಅವರನ್ನು ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ವರದಿಯಾಗಿದೆ!

​ ದರ್ಶನ್ ಅವರು ಸದ್ಯ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಆರೋಗ್ಯ ಪರಿಶೀಲನೆ ನಡೆಸುತ್ತಿದ್ದಾರಂತೆ. ಆದರೆ ದರ್ಶನ್​ ಯಾವ ಆರೋಗ್ಯ ಸಮಸ್ಯೆಯಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿದ್ದಾರೆ ಎಂಬುದು ಅಧಿಕೃತವಾಗಿ ತಿಳಿದುಬಂದಿಲ್ಲ!

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top