fbpx
ಸಮಾಚಾರ

ಪತ್ನಿ ರಾಧಿಕಾ ಹುಟ್ಟುಹಬ್ಬ: ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿಕೊಂಡ ನಟ ಯಶ್!

ನಟ ಯಶ್ ತಮ್ಮ ಪತ್ನಿ, ನಟಿ ರಾಧಿಕಾ ಪಂಡಿತ್ ಅವರ ಹುಟ್ಟುಹಬ್ಬದ ಸಲುವಾಗಿ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಪ್ರತಿ ವರ್ಷ ರಾಧಿಕಾ ಹುಟ್ಟುಹಬ್ಬದಂದು ಅಭಿಮಾನಿಗಳು ಅವರ ಮನೆ ಮುಂದೆ ಜಮಾಯಿಸುತ್ತಿದ್ದರು. ಆದರೆ ಈ ಬಾರಿ ಯಶ್ ಮನೆಯ ಬಳಿ ಬರದಂತೆ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

ನಮ್ಮ ಮನೆಯಲ್ಲಿ ಈಗ ಮಕ್ಕಳಿರುವುದರಿಂದ ಹಾಗೂ ಎಲ್ಲ ಕಡೆ ವೈರಸ್ ಹರಡುತ್ತಿರುವ ಕಾರಣ ತುಂಬಾ ಜನ ಸೇರುವುದು ಬೇಡ. ಈ ಬಾರಿ ಯಾವುದೇ ಆಚರಣೆ ಇಲ್ಲ. ಸಂಜೆ ನಾನು ಹಾಗೂ ರಾಧಿಕಾ ಒಟ್ಟಿಗೆ ಎಲ್ಲಿಯಾದರೂ ಹೋಗಿ ಕಾಲ ಕಳೆಯುತ್ತೇವೆ ಅಷ್ಟೇ” ಎಂದು ಯಶ್ ತಿಳಿಸಿದ್ದಾರೆ.

‘ಕೊರೋನಾ ವೈರಸ್‌’ ಹರಡುತ್ತಿರುವುದರಿಂದ ಎಲ್ಲರಿಗೂ ಹ್ಯಾಂಡ್‌ ಶೇಕ್‌ ಮಾಡೋ ಬದಲು ಭಾರತೀಯ ಸಂಸ್ಕೃತಿ ಪ್ರತೀಕವಾದ ನಮಸ್ತೇ ಮಾಡಿ, ನಿಮ್ಮ ಆರೋಗ್ಯ ಸರಿಯಿಲ್ಲವೆಂದರೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಿರಿ, ತುಂಬಾ ಜನರು ಇರುವೆಡೆ ಸೇರಬೇಡಿ, ಎಂದು ಯಶ್ ಎಲ್ಲರಿಗೂ ಸಲಹೆ ನೀಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top