fbpx
ಸಮಾಚಾರ

ಕೀಳು ಜಾತಿ ಹೇಳಿಕೆ: ಯತ್ನಾಳ್ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲು!

ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಪಾಕ್ ಏಜೆಂಟ್ ಎಂದು ಕರೆದು ವಿವಾದ ಕಿಡಿ ಹತ್ತಿಸಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದ್ದೀಗ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ವಿಧಾನಸಭೆಯಲ್ಲಿ ಮಹಾಭಾರತ ಬರೆದದ್ದುಕೀಳುಜಾತಿಯ ವಾಲ್ಮೀಕಿ ಎಂದು ಹೇಳಿ ಮತ್ತೊಂದು ಯಡವಟ್ಟು ಮಾಡಿಕೊಂಡಿದ್ದಾರೆ!

ವಾಲ್ಮೀಕಿ ಅವರ ವಿರುದ್ಧ ‘ಕೀಳುಜಾತಿ’ ಪದಬಳಕೆ ಮಾಡಿರುವುದನ್ನು ಖಂಡಿಸಿ ವಾಲ್ಮೀಕಿ ಸಮಾಜದ ಯುವ ಮುಖಂಡ ರಘು ದೊಡ್ಮನಿ ಎನ್ನುವರು ದಾವಣಗೆರೆ ಬಡಾವಣೆ ಪೋಲಿಸ್ ಠಾಣೆಯಲ್ಲಿ ಕೇಸ್ ಬುಕ್ ಮಾಡಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಮಾಯಣದ ಕತೃ, ವಿಶ್ವಗುರು ಮಹರ್ಷಿ ವಾಲ್ಮೀಕಿರವರನ್ನ ಒಬ್ಬ ಅಸ್ಪರ್ಶ ಎಂದು ಮತ್ತು ಅವರು ಹುಟ್ಟಿರುವ ಜಾತಿಯನ್ನ ಬಳಸಿ ನಿಂದಿಸಿ ಅವಮಾನಿಸಿದ್ದಾರೆ. ಆದ್ದರಿಂದ ಯತ್ನಾಳ್ ವಿರುದ್ಧ ಸನುಸೂಷಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ಪ್ರತಿಬಂದ) ಕಾಯ್ದೆ 1989ರ ಅಡಿಯಲ್ಲಿ ಜಾತಿ ನಿಂದನೆ ಪ್ರಕರಣವನ್ನ ದಾಖಲಿಸಿ ಸದರಿಯವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಿ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕೀಳುಮಟ್ಟದ ಹೇಳಿಕೆ ನೀಡಿರುವ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಸ್ಪೀಕರ್ ಅವರನ್ನು ಆಗ್ರಹಿಸಿದ ಅವರು, ಅವರು ಶಾಸಕ ಸ್ಥಾನದಲ್ಲಿ ಮುಂದುವರೆಯುವ ಅರ್ಹತೆ ಇಲ್ಲ. ಕೂಡಲೇ ಅವರು ರಾಜಕೀಯದಿಂದ ನಿವೃತ್ತಿ ಹೊಂದಬೇಕು. ಅಲ್ಲದೇ ಸಮಾಜದ ಮುಂದೆ ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡುವುದಾಗಿ ತಿಳಿಸಿದರು.

ಏನಿದು ಘಟನೆ?
ಬಜೆಟ್ ಅಧಿವೇಶನ ಸಂದರ್ಭ ಸಂವಿಧಾನ ಕುರಿತು ಚರ್ಚೆ ನಡೆಯುವ ವೇಳೆ ಮಾತನಾಡಿದ್ದ ಯತ್ನಾಳ್ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಭಾಷಣ ಒಂದನ್ನು ಉಲ್ಲೇಖ ಮಾಡಿ, ಹಿಂದೂಗಳಿಗೆ ವೇದಗಳು ಬೇಕಾಗಿದ್ದವು. ಆಗ ಅವರು ವ್ಯಾಸನನ್ನು ಕರೆದರು. ಅವರಿಗೊಂದು ಮಹಾ ಕಾವ್ಯ ಮಹಾಭಾರತ ಬೇಕಾಗಿತ್ತು. ಆವಾಗ ಅಸ್ಪೃಶ್ಯನಾದ ವಾಲ್ಮೀಕಿ ಬೇಕಾದ. ಇದೀಗ ಸಂವಿಧಾನದ ಅಗತ್ಯವಿದೆ ಅದಕ್ಕಾಗಿ ನನ್ನನ್ನು ಕರೆದರು ಎಂದು ಅಂಬೇಡ್ಕರ್ ಮಾತನ್ನು ಸದನದಲ್ಲಿ ತಪ್ಪಾಗಿ ಉಲ್ಲೇಖ ಮಾಡಿದ್ದರು.

ಕೂಡಲೇ ಮಧ್ಯಪ್ರವೇಶ ಮಾಡಿದ ಇತರ ಸದಸ್ಯರು ಯತ್ನಾಳ್ ತಪ್ಪಾಗಿ ಉಲ್ಲೇಖ ಮಾಡಿದ್ದನ್ನು ಗಮನಕ್ಕೆ ತಂದರು. ಮಹಾಭಾರತವನ್ನು ಬರೆದದ್ದು ವ್ಯಾಸ ಮಹರ್ಷಿ ಹಾಗೂ ರಾಮಾಯಣ ಬರೆದಿದ್ದು ವಾಲ್ಮೀಕಿ ಎಂದು ತಪ್ಪನ್ನು ತಿದ್ದಿದರು. ಸ್ವಲ್ಪ ಹೊತ್ತಿನ ಬಳಿಕ ತಮ್ಮ ತಪ್ಪನ್ನು ಅರಿತು, ”ಮಹಾಭಾರತ ಬರೆದವರು ವ್ಯಾಸರು” ಅಂತ ಹೇಳಿ ತಿದ್ದಿಕೊಂಡರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top