fbpx
ಸಮಾಚಾರ

ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ನಿಧನ!

ಕರ್ನಾಟಕದ ಮಾಜಿ ರಾಜ್ಯಪಾಲ, ಮಾಜಿ ಕೇಂದ್ರ ಸಚಿವ ಹಂಸರಾಜ್ ಭಾರದ್ವಾಜ್ ವಿಧಿವಶರಾಗಿದ್ದಾರೆ. ಕೇಂದ್ರ ಕಾನೂನು ಸಚಿವರಾಗಿ ಗಮನಾರ್ಹ ಸೇವೆ ಸಲ್ಲಿಸಿದ್ದ ಹಂಸರಾಜ್ ಭಾರದ್ವಾಜ್, ಕರ್ನಾಟಕದಲ್ಲಿ ರಾಜಕೀಯ ಅಸ್ಥಿರತೆ ಇದ್ದ ಸಂದರ್ಭದಲ್ಲಿ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.

ಬಹುದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ. ದೆಹಲಿಯ ನಿಗಮ್ ಬೋದ್ ಘಾಟ್​ನಲ್ಲಿ ಇಂದು ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಭಾರದ್ವಾಜ್ ಅವರ ಕುಟುಂಬ ವರ್ಗ ತಿಳಿಸಿದೆ.

1982ರಲ್ಲಿ ಮೊದಲ ಬಾರಿಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಸದಸ್ಯರಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಡಿಸೆಂಬರ್ 1984 ರಿಂದ ನವೆಂಬರ್ 1989ರವರೆಗೂ ಕೇಂದ್ರ ಕಾನೂನು ಸಚಿವರಾಗಿದ್ದರು. ಕೇಂದ್ರದಲ್ಲಿ ಯುಪಿಎ–1 ಸರ್ಕಾರ ಇದ್ದಾಗ ಕಾನೂನು ಸಚಿವರಾಗಿದ್ದ ಅವರು, 2009ರಿಂದ 2014ರವರೆಗೆ ಕರ್ನಾಟಕದ ರಾಜ್ಯ‍ಪಾಲರಾಗಿದ್ದರು. ಕೆಲ ಕಾಲ ಕೇರಳದ ರಾಜ್ಯಪಾಲರಾಗಿಯೂ ಅವರು ಕೆಲಸ ಮಾಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top