ಕರ್ನಾಟಕ ಸರ್ಕಾರ ಕಂದಾಯ ಇಲಾಖೆಯು, ಅಟಲ್ಜೀ ಜನಸ್ನೇಹಿ ಕೇಂದ್ರಗಳಿಗೆ ನಾಡಕಛೇರಿ ಸೇವೆಗಳಿಗಾಗಿ ಹೊರಗುತ್ತಿಗೆ ಆಧಾರದ ಮೇಲೆ ಡಾಟಾ ಎಂಟ್ರಿ ಆಪರೇಟರ್ಗಳ ನೇಮಕಾತಿಗೆ ಮಾರ್ಗಸೂಚಿ ಸಿದ್ಧಪಡಿಸಿದೆ.
ರಾಜ್ಯದ ಎಲ್ಲಾ ನಾಡಕಛೇರಿಗಳಿಗೆ ಡೇಟಾ ಎಂಟ್ರಿ ಆಪರೇಟರ್ಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತದೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ಹಂತದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಟೆಂಡರ್ ಕರೆಯಲು ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯದ ನಿರ್ದೇಶಕರು ಸೂಚನೆ ಹೊರಡಿಸಿದ್ದಾರೆ.
ನೇಮಕಾತಿಯ ವಿಕೇಂದ್ರೀಕೃತ ಅಧಿಕಾರವನ್ನು ಆಯಾ ಜಿಲ್ಲಾಧಿಕಾರಿಗಳಿಗೆ ವಹಿಸಿ, ಇದಕ್ಕೆ ಸಂಬಂಧಪಟ್ಟಂತೆ ಜಿಲ್ಲಾ ಮಟ್ಟದಲ್ಲಿ ಟೆಂಡರ್ ಅನ್ನು ಕರೆಯುವ ಪ್ರಾಧಿಕಾರಿಯನ್ನಾಗಿ ಹಾಗೂ ಇ-ಟೆಂಡರ್ ಅಂತಿಮಗೊಳಿಸುವ ಹಾಗೂ ಇನ್ನಿತರೆ ಅನುಮೋದಿನೆಯನ್ನು ನೀಡಲು, ಜಿಲ್ಲಾಧಿಕಾರಿಗಳಿಗೆ ಅಧಿಕಾರ ಪ್ರತ್ಯಾ ಯೋಜನೆ ನೀಡಿ ಸರ್ಕಾದ ಆದೇಶ ಹೊರಡಿಸಿದೆ.
ಚಾಮರಾಜನಗರ 22, ಚಿಕ್ಕಮಗಳೂರು 44, ಚಿತ್ರದುರ್ಗ 31, ದಕ್ಷಿಣ ಕನ್ನಡ 27, ಧಾರವಾಡ 24, ಗದಗ 21, ಹಾವೇರಿ 33, ಕೊಪ್ಪಳ 28, ಮಂಡ್ಯ 55, ಮೈಸೂರು 47, ರಾಯಚೂರು 45, ರಾಮನಗರ 23, ಶಿವಮೊಗ್ಗ 52, ಉತ್ತರ ಕನ್ನಡ 52 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಿಂದ ಅಂಗೀಕೃತಗೊಂಡ ಕಂಪ್ಯೂಟರ್ ತರಬೇತಿ ಕೇಂದ್ರಗಳಿಂದ ಟ್ರೈನಿಂಗ್ ಪಡೆದು, ಪ್ರಮಾಣ ಪತ್ರ ಹೊಂದಿರಬೇಕು. ಎಸ್ಎಸ್ಎಲ್ಸಿ ವಿದ್ಯಾರ್ಹತೆ ಹೊಂದಿರಬೇಕು. ಈ ಹುದ್ದೆಗಳನ್ನು ಭರ್ತಿ ಮಾಡಲು ಜಿಲ್ಲಾಧಿಕಾರಿಗಳು ಶೀಘ್ರದಲ್ಲಿಯೇ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.
ಒಟ್ಟಾರೆ ರಾಜ್ಯದ ಎಲ್ಲ ನಾಡಕಚೇರಿಗಳಿಗೆ ಈ ಮೊದಲು ನಿಗದಿಪಡಿಸಿದ 1,916 ಡೇಟಾ ಎಂಟ್ರಿ ಆಪರೇಟರ್ಗಳ ಬದಲು ಈಗ 1,121 ಜನರನ್ನು ನೇಮಕ ಮಾಡಿಕೊಳ್ಳುವಂತೆ ಸರ್ಕಾರ ತಿಳಿಸಿದೆ. ಕೆಲ ಜಿಲ್ಲೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭವಾಗದ ಕಾರಣ, ಕೂಡಲೇ ಭರ್ತಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಅಟಲ್ಜೀ ಜನಸ್ನೇಹಿ ನಿರ್ದೇಶನಾಲಯದ ನಿರ್ದೇಶಕರು ಸೂಚಿಸಿದ್ದಾರೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮತ್ತು ಜಿಲ್ಲಾವಾರು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಮಾಹಿತಿಗಾಗಿ ಈ ಕೆಳಗಿನ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಿ
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
