fbpx
ಸಮಾಚಾರ

ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ: ಜನತೆಯಲ್ಲಿ ಮೂಡಿದ ಕುತೂಹಲ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಬಗ್ಗೆ ಪ್ರಧಾನಿಗಳ ಕಾರ್ಯಾಲಯ ಟ್ವೀಟ್ ಮಾಡಿದ್ದು, ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ ಎಂದು ಬರೆದುಕೊಂಡಿದೆ.

 

 

ಇದೇ ಭಾನುವಾರ ಮೇ 17ರಂದು ದೇಶದಲ್ಲಿ ಹೇರಲಾಗಿರುವ 3ನೇ ಹಂತದ ಲಾಕ್ ಡೌನ್ ಕೊನೆಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ಕಾರ್ಯತಂತ್ರ ಬಗ್ಗೆ ಮತ್ತು ಕೊರೋನಾ ನಿಯಂತ್ರಣ ಬಗ್ಗೆ ನಿನ್ನೆ ಪ್ರಧಾನಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳ ಜೊತೆ ವಿಡಿಯೊ ಕಾನ್ಫರೆನ್ಸ್ ಸಂವಾದ ನಡೆಸಿದ್ದರು.

ಅದರಲ್ಲಿ ಹಲವು ವಿಷಯಗಳು ಚರ್ಚೆಗೆ ಬಂದಿದ್ದವು. ಈ ನಿಟ್ಟಿನಲ್ಲಿ ಇಂದು ಮೋದಿಯವರು ಮಾಡುತ್ತಿರುವ ಭಾಷಣ ಮಹತ್ವದ್ದಾಗಿದ್ದು ಲಾಕ್ ಡೌನ್ ಸಡಿಲಿಕೆ ಬಗ್ಗೆ ಪ್ರಧಾನಿ ಏನು ಹೇಳುತ್ತಾರೆ ಎಂಬ ಕುತೂಹಲ ಮನೆ ಮಾಡಿದೆ. ಒಟ್ಟಿನಲ್ಲಿ ಕೊರೊನಾ ವೈರಸ್ ಭೀತಿ ನಂತರ ಇಂದಿನ ಭಾಷಣ ಸೇರಿ ಐದನೇಯ ಬಾರಿ ದೇಶವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೋದಿ ದೇಶವ್ಯಾಪಿ ಲಾಕ್ ಡೌನ್ ಮತ್ತೆ ವಿಸ್ತರಿಸುತ್ತಾರಾ ಅಥವಾ ವಿಸ್ತರಿಸದೇ ಮತ್ತಷ್ಟು ವಿನಾಯಿತಿ ಪ್ರಕಟಿಸುತ್ತಾರಾ ಎಂಬ ಪ್ರಶ್ನೆ ದೇಶದ ಪ್ರಜೆಗಳಲ್ಲಿ ಮೂಡಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top