fbpx
ಸಮಾಚಾರ

ತಿರುಪತಿ ಆಸ್ತಿ ಹರಾಜು ನಿರ್ಧಾರಕ್ಕೆ ಸರ್ಕಾರದ ತಡೆ

ಭಕ್ತರು ದಾನವಾಗಿ ನೀಡಿದ 50 ಸ್ಥಿರಾಸ್ತಿಗಳನ್ನು ಹರಾಜು ಹಾಕುವ ತಿರುಪತಿ ತಿರುಮಲ ದೇಗುಲ ಆಡಳಿತ ಮಂಡಳಿ (ಟಿಟಿಡಿ) ನಿರ್ಧಾರಕ್ಕೆ ಆಂಧ್ರ ಪ್ರದೇಶ ಸರ್ಕಾರ ಸೋಮವಾರ ತಡೆ ನೀಡಿದೆ. ಆಸ್ತಿ ಹರಾಜಿಗೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಆಂಧ್ರಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.

ತಮಿಳುನಾಡು, ಆಂಧ್ರಪ್ರದೇಶ, ಉತ್ತರಾಖಂಡ್ ಸೇರಿದಂತೆ ವಿವಿಧ ರಾಜ್ಯದಲ್ಲಿ ತಿರುಪತಿ ದೇವಾಲಯಕ್ಕೆ ಸೇರಿದ ಹಲವು ಆಸ್ತಿಗಳಿವೆ. ಇವುಗಳಲ್ಲಿ ತಮಿಳುನಾಡಿನಲ್ಲಿರುವ 23 ಆಸ್ತಿ ಮಾರಾಟ ಮಾಡುವ ತೀರ್ಮಾನ ಕೈಗೊಂಡಿತ್ತು. ಆಂಧ್ರ ಸರ್ಕಾರ ಇಂತಹ ತೀರ್ಮಾನ ಕೈಗೊಳ್ಳುವ ಮುನ್ನ ಸರ್ಕಾರದ ಜೊತೆ ಸಮಾಲೋಚನೆ ನಡೆಸಿ ಎಂದು ಸಲಹೆ ನೀಡಿದೆ.

ವಿವಾದದ ಕುರಿತು ಪ್ರತಿಕ್ರಿಯೆ ನೀಡಿರುವ ತಿರುಪತಿ ತಿರುಮಲ ದೇವಸ್ಥಾನಂ ಅಧ್ಯಕ್ಷ ವಿ.ವೈ ಸುಬ್ಬಾರೆಡ್ಡಿ, ಇದು ಕೇವಲ ಪ್ರಸ್ತಾವನೆಯಾಗಿದ್ದು ಇದೇ ಅಂತಿಮ ನಿರ್ಧಾರವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆಂಧ್ರಪ್ರದೇಶ, ತಮಿಳುನಾಡು ಮತ್ತು ರಿಷಿಕೇಶ್‌ದಲ್ಲಿರುವ ಟಿಟಿಡಿಗೆ ಸೇರಿದ ಸುಮಾರು 50ಕ್ಕೂ ಹೆಚ್ಚು ಸ್ಥಿರಾಸ್ತಿಗಳನ್ನು ಮಾರಾಟ ಮಾಡಲು 2016ರ ಜನವರಿಯಲ್ಲೇ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆಗ ರಾಜ್ಯದಲ್ಲಿ ತೆಲುಗು ದೇಶಂ ಪಕ್ಷ ಅಧಿಕಾರದಲ್ಲಿತ್ತು ಎಂದು ವಿ.ವೈ. ಸುಬ್ಬಾರೆಡ್ಡಿ ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top