fbpx
ಸಮಾಚಾರ

ಜೂನ್‌ 1ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರ ಪ್ರವೇಶಕ್ಕೆ ಅವಕಾಶ: ಆದರೆ ಷರತ್ತುಗಳು ಅನ್ವಯ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜೂನ್ 1ರಿಂದ (ಸೋಮವಾರ) ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಆಪ್ತ ಕಾರ್ಯದರ್ಶಿ ಎ.ವಿ.ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇವಾಲಯದ ಪ್ರಕಟಣೆ ಹೀಗಿದೆ. “ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಾಲಯವು ಜೂನ್ ಒಂದರಿಂದ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಗುವುದು. ಸರಕಾರದ ಆದೇಶದಂತೆ, ಸ್ವಚ್ಚತೆ, ಸ್ಯಾನಿಟೈಸರ್ ಬಳಕೆ, ಧರ್ಮಲ್ ಸ್ಕ್ರೀನಿಂಗ್ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಂಡು ಸ್ವಾಮಿಯ ದರ್ಶನಕ್ಕೆ ಅವಕಾಶ ನೀಡಲಾಗುವುದು”ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

 

 

ಸರ್ಕಾರದ ನಿಯಮಾವಳಿಗಳನ್ನು ಪಾಲಿಸುವುದರ ಜೊತೆಗೆ ಧರ್ಮಸ್ಥಳದ ವತಿಯಿಂದ ಸಾಕಷ್ಟು ಮುನ್ನೆಚ್ಚರಿಕೆ ವಹಿಸಲಾಗುವುದು. ಕೊರೊನಾ ನಿಯಂತ್ರಣಕ್ಕೆ ಆದ್ಯತೆ ನೀಡಲಾಗುವುದು. ವಸತಿ ವ್ಯವಸ್ಥೆ ಬಗ್ಗೆ ನಿರ್ಧಾರ ತೆಗೆದುಕೊಂಡಿಲ್ಲ. ಅಂತರ ಕಾಪಾಡುವುದು, ಸ್ಯಾನಿಟೈಸರ್ ಬಳಕೆ, ಮಾಸ್ಕ್ ಕಡ್ಡಾಯ ಒಳಗೊಂಡಂತೆ ಭಕ್ತರ ಸಂಖ್ಯೆಯಲ್ಲಿ ನಿಯಂತ್ರಣ ಇಟ್ಟುಕೊಳ್ಳಲಾಗುವುದು.

ದೇವರ ದರ್ಶನ ಸಮಯ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ. ಬಳಿಕ ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಪಾರುಪತ್ಯಗಾರರಾದ ಲಕ್ಷ್ಮೇನಾರಾಯಣ (9448252508) ಇವರನ್ನು ಸಂಪರ್ಕಿಸಬಹುದಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top