fbpx
ಸಮಾಚಾರ

ನಮಾಜ್ ಮಾಡುತ್ತಿದ್ದಂತೆಯೇ ಕುಸಿದುಬಿದ್ದು ಸಾವನ್ನಪ್ಪಿದ ವ್ಯಕ್ತಿ

ಮಸೀದಿಯಲ್ಲಿ ನಮಾಜ್ ಮಾಡುವಾಗ ಕುಸಿದು ಬಿದ್ದು ವ್ಯಕ್ತಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಕಳಾರ ಎಂಬಲ್ಲಿ ನಡೆದಿದೆ. ಕಳಾರ ನಿವಾಸಿ ಅಬ್ದುಲ್ ಖಾದರ್ ಮೃತ ವ್ಯಕ್ತಿ. ನಮಾಜ್ ಮಾಡುತ್ತಿದ್ದ ಸ್ಥಳದಲ್ಲೇ ಈತನ ಪ್ರಾಣ ಪಕ್ಷಿ ಹಾರಿ ಹೋಗಿದೆ.

ಪ್ರತಿನಿತ್ಯ ನಮಾಜ್ ಮಾಡಲು ಹೋಗುತ್ತಿದ್ದ ಅಬ್ದುಲ್ ಖಾದರ್ ನೆನ್ನೆ ಕೂಡ ಮುಂಜಾನೆ 4 ಗಂಟೆ ಸುಮಾರಿಗೆ ಮಸೀದಿ ತೆರಳಿದ್ದಾರೆ. ಹೀಗೆ ಬಂದವರೆ ತಮ್ಮ ಪಾಡಿಗೆ ನಮಾಜ್ ಮಾಡುತ್ತಿದ್ದರು. ನಿಂತಿದ್ದ ಅಬ್ದುಲ್ ಖಾದರ್ ಕೂಡಲೇ ಕುಸಿದು ಬಿದ್ದಿದ್ದಾರೆ.

ಇದೇ ಸ್ಥಳದಲ್ಲೇ ಇದ್ದ ವ್ಯಕ್ತಿಯೊಬ್ಬರು ಎಬ್ಬಿಸಲು ಹೋದಾಗ ಖಾದರ್ ಅದಾಗಲೇ ಮೃತಪಟ್ಟಿದ್ದಾರೆ. ಈ ಎಲ್ಲಾ ದೃಶ್ಯಗಳು ಮಸೀದಿಯಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top