fbpx
ಸಮಾಚಾರ

ನಾಳೆ ರಾಜ್ಯದಲ್ಲಿ ಭಾನುವಾರದ ಕರ್ಫ್ಯೂ ಇಲ್ಲ, ಎಂದಿನಂತೆ ಚಟುವಟಿಕೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಕೊರೊನಾ ಹಿನ್ನೆಲೆಯಲ್ಲಿ ಪ್ರತಿ ಭಾನುವಾರ ರಾಜ್ಯಾದ್ಯಂತ ಸಂಪೂರ್ಣ ಲಾಕ್‍ಡೌನ್ ಮಾಡಲಾಗಿತ್ತು. ಆದರೆ ರಾಜ್ಯ ಸರ್ಕಾರ ನಾಳೆ ಕರ್ಫ್ಯೂವನ್ನು ಸಡಿಲಗೊಳಿಸಿ ಆದೇಶ ಹೊರಡಿಸಿದೆ. ಭಾನುವಾರ ರಾಜ್ಯದಲ್ಲಿ ಯಾವುದೇ ಸಂಪೂರ್ಣ ಲಾಕ್‍ಡೌನ್ ಇಲ್ಲ. ಎಂದಿನಂತೆ ಎಲ್ಲಾ ಚಟವಟಿಕೆಗಳು ಇರಲಿದೆ ಎಂದು ಸಿಎಂ ಕಚೇರಿಯಿಂದ ಅಧಿಕೃತವಾಗಿ ಘೋಷಣೆಯಾಗಿದೆ.

‘ನಾಳೆ ಅಂದರೆ ಮೇ 31ರಂದು ಸಂಪೂರ್ಣ ಲಾಕ್‌ಡೌನ್ ಕರ್ಫ್ಯೂ ಇರುವುದಿಲ್ಲ. ಲಾಕ್ ಡೌನ್ ಸಡಿಲಗೊಳಿಸಿದ ನಂತರ ರಾಜ್ಯದಲ್ಲಿ ಎಂದಿನಂತೆ ಇರುವ ದೈನಂದಿನ ಚಟುವಟಿಕೆ ನಾಳೆ ಕೂಡ ಇರುತ್ತದೆ ಎಂದು ಸಿಎಂ ಬಿಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ

ಅಂದಹಾಗೆ ಕೊರೊನಾ ವೈರಸ್‌ ಸಾಂಕ್ರಾಮಿಕ ಹರಡುವಿಕೆ ತಡೆಯುವ ಉದ್ದೇಶದಿಂದ ದೇಶದಾದ್ಯಂತ ನಾಲ್ಕನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. ಈ ಹಂತದಲ್ಲಿ ಅನೇಕ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ, ಭಾನುವಾರದಂದು ಮಾತ್ರ ಸಂಪೂರ್ಣ ಲಾಕ್‌ಡೌನ್ ಇರಬೇಕು. ಅಗತ್ಯ ಸೇವೆ ಹೊರತುಪಡಿಸಿ ಯಾವುದೇ ಚಟುವಟಿಕೆ ನಡೆಸಬಾರದು ಎಂದು ರಾಜ್ಯ ಸರ್ಕಾರ ಈ ಹಿಂದೆ ಆದೇಶಿಸಿತ್ತು. ಅದರಂತೆ ಕಳೆದ ಭಾನುವಾರ ರಾಜ್ಯದಾದ್ಯಂತ ಸಂಪೂರ್ಣ ಲಾಕ್‌ಡೌನ್ ಆಗಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top