fbpx
ಸಮಾಚಾರ

ಸರ್ಕಾರಿ ಅಧಿಕಾರಿಗೆ ಚಪ್ಪಲಿಯಿಂದ ಹೊಡೆದ ಬಿಜೆಪಿ ಮುಖಂಡೆ: ವಿಡಿಯೋ ವೈರಲ್

2019ರಲ್ಲಿ ಹರಿಯಾಣದ ಅದಮ್​ಪುರ ಕ್ಷೇತ್ರದಿಂದ ವಿಧಾನಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಹಾಗೂ ಟಿಕ್​ಟಾಕ್ ಸ್ಟಾರ್ ಸೋನಾಲಿ ಪೋಗತ್​ ಬಲ್ಸಾಮಾದ್​ನ ಮಾರುಕಟ್ಟೆಯಲ್ಲಿ ದುರ್ವರ್ತನೆ ತೋರಿದ್ದಾರೆ. ಮಂಡಿ ಕಾರ್ಯದರ್ಶಿ ಸುಲ್ತಾನ್ ಸಿಂಗ್​ ಎಂಬುವವರನ್ನು ಚಪ್ಪಲಿಯಿಂದ ಹೊಡೆದು ಸುದ್ದಿಯಾಗಿದ್ದಾರೆ.

 

 

ರೈತರ ಕೆಲವು ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಅವರು ಶುಕ್ರವಾರ ಜಿಲ್ಲಾ ಮಾರುಕಟ್ಟೆ ಸಮಿತಿಯ ಅಧಿಕಾರಿಗಳನ್ನು ಭೇಟಿ ಮಾಡಲು ಹೋಗಿದ್ದರು. ಆಗ ಸುಲ್ತಾನ್ ಸಿಂಗ್ ನಿಮ್ಮಂಥ ಸುಂದರ ಚೆಲುವೆ, ಸ್ಟಾರ್ ಬಿಸಿಲಿನಲ್ಲಿ ಹೀಗೆ ಮಂಡಿಗೆ ಬರಬಾರದು ಎಂದು ಹೇಳಿದ್ದರು.

ಇದರಿಂದ ಕೋಪಗೊಂಡ ಫೋಗಟ್, ಸಿಂಗ್ ಜೊತೆ ತೀವ್ರವಾಗಿ ಮಾತುಕತೆ ನಡೆಸಿದ್ದಾರೆ. ನಂತರ ಚಪ್ಪಲಿ ತೆಗೆದುಕೊಂಡು ಥಳಿಸಿದ್ದಾರೆ. ಈ ವಿಡಿಯೋವನ್ನು ಸ್ಥಳದಲ್ಲಿದ್ದವರು ರೆಕಾರ್ಡ್ ಮಾಡಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾರೆ. ಸೋನಾಲಿ ಪೋಗತ್ ಚಪ್ಪಲಿಯಿಂದ ಅಧಿಕಾರಿಯನ್ನು ಹೊಡೆಯುವ ವಿಡಿಯೋ ಈಗ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top