fbpx
ಸಮಾಚಾರ

ತಂದೆ ಬೆನ್ನಲ್ಲೇ ಸಚಿವ ಸುಧಾಕರ್ ಮನೆ ಕೆಲಸದವರಿಗೆ, ಹೆಂಡತಿ, ಮಗಳಿಗೆ ಕೊರೋನಾ ಸೋಂಕು ದೃಢ!

ರಾಜ್ಯದ ಕೊರೊನಾ ವೈರಸ್ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರ ತಂದೆಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟ ಬೆನ್ನಲ್ಲೇ ಅವರ ಪತ್ನಿ ಮತ್ತು ಮಗಳಿಗೆ ಕೊರೊನಾ ವೈರಸ್ ಇರುವುದು ಪಾಸಿಟಿವ್ ಎಂದು ವರದಿ ಬಂದಿದೆ. ಈ ಕುರಿತು ಸಚಿವ ಸುಧಾಕರ್‌ ಅವರು ಟ್ವಿಟರ್‌ನಲ್ಲಿ ಮಾಹಿತಿ ಖಚಿತಪಡಿಸಿದ್ದಾರೆ.

 

 

ಈ ಕುರಿತಾಗಿ ಟ್ಟೀಟ್‌ ಮಾಡಿರುವ ಅವರು ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ನನ್ನ ಪತ್ನಿ ಹಾಗು ಮಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ.ಅವರಿಬ್ಬರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಇಬ್ಬರು ಗಂಡುಮಕ್ಕಳು ಮತ್ತು ನನಗೆ ಕೊರೋನಾ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳಿತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ. ಎಂದಿದ್ದಾರೆ.

 

 

ನಿನ್ನೆ ತಂದೆಗೆ ಕೊರೊನಾ ದೃಢಪಟಿದ್ದು, ಈ ವಿಚಾರವನ್ನು ಸ್ವತಃ ಸಚಿವರೇ ಟ್ವೀಟ್ ಮಾಡಿ ತಿಳಿಸಿದ್ದರು. ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿ ಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರೆ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದು ಬರೆದುಕೊಂಡಿದ್ದರು.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top