fbpx
ಸಮಾಚಾರ

ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್: ಸರ್ಕಾರೀ ಹುದ್ದೆಗಳ ನೇಮಕಾತಿಗೆ ತಡೆ ವಿಧಿಸಿದ ಸರ್ಕಾರ

ಸರ್ಕಾರಿ ನೌಕರಿ ಪಡೆಯಬೇಕು ಎಂಬ ಆಸೆ ಇಟ್ಟುಕೊಂಡವರಿಗೆ ಸರಕಾರ ಬಿಗ್ ಶಾಕ್ ನೀಡಿದೆ. ಈ ವರ್ಷ ನೇರ, ವೃಂದ ಹಾಗೂ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ತಡೆ ಹಿಡಿದಿದೆ. ಕೊರೋನಾ ಸಂದರ್ಭದಲ್ಲಿ ಪರಿಸ್ಥಿತಿ ನಿಭಾಯಿಸಲು ಆರ್ಥಿಕ ಸ್ಥಿತಿಗತಿ ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ಸಂಪನ್ಮೂಲ ಕ್ರೋಢಿಕರಣದ ಉದ್ದೇಶದಿಂದ ನೇಮಕಾತಿಗಳನ್ನು ತಡೆ ಹಿಡಿಯಲಾಗಿದೆ ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಕೊರೊನಾವೈರಸ್ ಸೋಂಕು ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರವು ಶಿಸ್ತುಕ್ರಮಗಳನ್ನು ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಹಿನ್ನೆಲೆ ಮುಂದಿನ ಆದೇಶದವರೆಗೂ ನೇರ ನೇಮಕಾತಿ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದೆ.

‘ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳು ಮತ್ತು ಬ್ಯಾಕ್‌ಲಾಗ್ ಹುದ್ದೆಗಳು ಸೇರಿದಂತೆ ಎಲ್ಲಾ ನೇರ ನೇಮಕಾತಿ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ಮುಂದಿನ ಆದೇಶದವರೆಗೆ ತಡೆ ಹಿಡಿಯಲಾಗಿದೆ’ ಎಂದು ಆರ್ಥಿಕ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಎಸ್‌.ಎನ್.ಪ್ರಸಾದ್ ಸುತ್ತೋಲೆ ಹೊರಡಿಸಿದ್ದಾರೆ.

ಇನ್ನೊಂದು ಕಡೆ ಸರಕಾರಿ ಕಚೇರಿಗಳಲ್ಲಿ ಸಿಬ್ಬಂದಿ ಕೊರತೆ ಇದೆ. ಕೊವೀಡ್ ನಿಯಂತ್ರಣ ಸಂದರ್ಭದಲ್ಲಿ ಸಿಬ್ಬಂದಿ ಕೊರತೆಯಿಂದಾಗಿ ಸಾಕಷ್ಟು ತೊಂದರೆಗಳಾಗುತ್ತಿವೆ. ಈ ಸಂದರ್ಭದಲ್ಲಿ ಸರಕಾರಿ ಕಚೇರಿಗಳಲ್ಲಿ ಸಿಬ್ಬಂದಿಗಳಿದ್ದರೆ ಕೆಲಸಗಳಾಗುತ್ತವೆ. ಆದರೆ ಸರಕಾರವು ಕುಂಟು ನೆಪ ತೆಗೆದು ನೇಮಕಾತಿ ತಡೆ ಹಿಡಿದಿದೆ. ನೇಮಕಾತಿ ಪ್ರಕ್ರಿಯೆಗಳನ್ನು ಮುಂದುವರಿಸಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top