fbpx
ಸಮಾಚಾರ

ಆಧುನಿಕ ‘ಭಗೀರಥ’ ಕಾಮೇಗೌಡರು ಆಸ್ಪತ್ರೆಗೆ ದಾಖಲು

ಆಧುನಿಕ ಭಗೀರಥನೆಂಬ ಖ್ಯಾತಿಯ ಮಳವಳ್ಳಿ ತಾಲ್ಲೂಕು ದಾಸನದೊಡ್ಡಿ ಕಾಮೇಗೌಡರು ದಿಢೀರ್ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾಮೇಗೌಡರ ಕಾಲಿಗೆ ತೀವ್ರವಾದ ಗಾಯವಾಗಿದೆ. ಹೀಗಾಗಿ ಜಿಲ್ಲೆಯ ಮಳವಳ್ಳಿ ತಾಲೂಕಾಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಮೇಗೌಡರ ಎರಡು ಕಾಲುಗಳು ತೀವ್ರವಾಗಿ ಊತಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಕಾಮೇಗೌಡರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಹಿಂದಿನಿಂದಲೂ ನರಸಂಬಂಧಿ ಕಾಯಿಲೆಯಿಂದ ಕಾಮೇಗೌಡರು ಬಳಲುತ್ತಿದ್ದಾರೆ. ಈ ಬಗ್ಗೆ ತಿಳಿಯುತ್ತಿದ್ದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ತಹಶೀಲ್ದಾರ್ ಸೇರಿದಂತೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ಕಾಮೇಗೌಡರ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೇ ವೈದ್ಯರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ.

ಕಾಮೇಗೌಡರು ಕುರಿ ಕಾಯುತ್ತಲೇ ಸ್ವಂತ ಹಣದಿಂದ ಸುಮಾರು ೧೬ ಕೆರೆ ನಿರ್ಮಿಸುವ ಮೂಲಕ ಪ್ರಧಾನಿ ಮೋದಿ ಅವರ ಮನ್ ಕೀ ಬಾತ್ ನಲ್ಲಿ ಪ್ರಶಂಸೆಗೆ ಒಳಗಾಗಿ ಇಡೀ ದೇಶ ಮಾತ್ರವಲ್ಲ ವಿಶ್ವದಲ್ಲೇ ಹೆಸರುವಾಸಿಯಾಗಿದ್ದರು. ಪ್ರಧಾನಿ ಬಳಿಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೂಡ ಕೆರೆ ಕಾಮೇಗೌಡ ಅವರ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದರು. ಅಲ್ಲದೇ ಅವರ ಕಾರ್ಯಕ್ಕಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೂಚನೆ ನೀಡಿ ಉಚಿತವಾಗಿ ಬಸ್ ಪಾಸ್ ವ್ಯವಸ್ಥೆ ಮಾಡಲು ಸೂಚಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top