fbpx
ಸಮಾಚಾರ

ಜೈಲಿನಲ್ಲಿರುವ ನಟಿ ರಾಗಿಣಿಗೆ ಮತ್ತೊಮ್ಮೆ ಶಾಕ್

ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ CCB ಯಿಂದ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿಗೆ ಮತ್ತೊಂದು ಶಾಕ್ ಎದುರಾಗಿದೆ. ರಾಗಿಣಿ ದ್ವಿವೇದಿ ಜಾಮೀನು ಅರ್ಜಿಯನ್ನ ನ್ಯಾಯಾಲಯ ಸೋಮವಾರಕ್ಕೆ ಮುಂದೂಡಿದೆ.

ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ಐವರ ಜಾಮೀನು ಅರ್ಜಿಯ ವಿಚಾರಣೆಗ ನ್ಯಾಯಾಲಯದ ಮುಂದೆ ಬಂದಿತ್ತು. ಈ ವೇಳೆ ಸಿಸಿಬಿ ಪರ ವಕೀಲರು, ಪ್ರಕರಣದ ಕೆಲವರು ಜೈಲು ಮತ್ತು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಎಲ್ಲ ಆರೋಪಿಗಳ ಅರ್ಜಿಯೂ ಒಂದಕ್ಕೊಂದು ಲಿಂಕ್ ಇದೆ. ಒಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೇಳಿದರು.

ಅರ್ಜಿದಾರರ ಪರ ವಕೀಲರು ಆಕ್ಷೇಪಣೆ ಸಲ್ಲಿಸಲು ಇವತ್ತು ಸೂಚಿಸಲಾಗಿತ್ತು. ವಿನಾಕಾರಣ ಕಾಲಹರಣ ಮಾಡಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕೊನೆಗೆ ನ್ಯಾಯಾಲಯ ಅರ್ಜಿಯನ್ನು ಸೋಮವಾರಕ್ಕೆ ಮುಂದೂಡಿದೆ. ಹಾಗಾಗಿ ಇನ್ನರೆಡು ದಿನ ಆರೋಪಿಗಳಿಗೆ ಜೈಲೂಟ ಖಚಿತವಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top