fbpx
ಸಮಾಚಾರ

ಎಸ್.​​ಪಿ ಬಾಲಸುಬ್ರಮಣ್ಯಂ ಸ್ಥಿತಿ ಮತ್ತಷ್ಟು ಕ್ಷೀಣ

ಕೊರೊನಾ ಸೋಂಕಿಗೆ ಒಳಗಾಗಿದ್ದ ಖ್ಯಾತ ಹಿನ್ನೆಲೆ ಗಾಯಕ ಎಸ್​​. ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಮತ್ತಷ್ಟು ಗಂಭೀರವಾಗಿದೆ. ಗಾನ ಗಾರುಡಿಗನ ಆರೋಗ್ಯ ಇನ್ನಷ್ಟು ಬಿಗಡಾಯಿಸಿದೆ ಎಂದು ಚೆನ್ನೈನ ಎಂಜಿಎಂ ಆಸ್ಪತ್ರೆಯ ಹೆಲ್ತ್​ ಬುಲೆಟಿನ್​ನಲ್ಲಿ ತಿಳಿಸಲಾಗಿದೆ.

ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಕಳೆದ ಆಗಸ್ಟ್ 5ರಂದು ಆಸ್ಪತ್ರೆಗೆ ದಾಖಲಾಗಿದ್ದ ಎಸ್ ಪಿ ಬಾಲಸುಬ್ರಮಣ್ಯಂ ಅವರು ಈಗಲೂ ಇಸಿಎಂಒ ಮತ್ತು ಲೈಫ್ ಸಪೋರ್ಟ್ ನಲ್ಲಿದ್ದಾರೆ ಎಂದು ಎಂಜಿಎಂ ಆಸ್ಪತ್ರೆ ತಿಳಿಸಿದೆ.

ಕಳೆದ 24 ಗಂಟೆಯಲ್ಲಿ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿದ್ದು, ಗರಿಷ್ಠ ಲೈಫ್ ಸಪೋರ್ಟ್ ನೀಡಲಾಗಿದೆ. ಆಸ್ಪತ್ರೆಯ ತಜ್ಞರ ತಂಡ ಅವರ ಆರೋಗ್ಯ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಎಂಜಿಎಂ ಆಸ್ಪತ್ರೆ ತಿಳಿಸಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top