fbpx
ಸಮಾಚಾರ

ಹಾಡುಹಗಲೇ ಚಿತ್ರ ನಟ ಸುರೇಂದ್ರ ಬಂಟ್ವಾಳ್ ಕೊಚ್ಚಿ ಬರ್ಬರ ಹ’ತ್ಯೆ!

ತುಳು ಸಿನಿಮಾ ನಟ ಸುರೇಂದ್ರ ಬಂಟ್ವಾಳ್(40) ಎಂಬವರನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಸ್ತಿ ಪಡ್ಪುವಿನ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಬಂಟ್ವಾಳ ಬಂಢಾರಿಬೆಟ್ಟು ನಿವಾಸಿಯಾಗಿದ್ದ ಸುರೇಂದ್ರ ಬಂಟ್ವಾಳ್ ಅವರು ಬಿಸಿ ರೋಡ್ ನ ಫ್ಲ್ಯಾಟ್ ನಲ್ಲಿ ವಾಸವಾಗಿದ್ದು, ಮನೆಯಲ್ಲೇ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಮಂಗಳವಾರ ರಾತ್ರಿ ಕೊಲೆಯಾಗಿರಬಹುದು ಎನ್ನಲಾಗಿದ್ದು, ಇಂದು ಮಧ್ಯಾಹ್ನ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿಂದೆ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸುರೇಂದ್ರ ಬಂಟ್ವಾಳ್ ನಂತರ ಸಂಘಟನೆ ತೊರೆದಿದ್ದರು.

ಕೆಲ ತುಳು ಚಿತ್ರಗಳಲ್ಲಿ ನಟಿಸಿದ್ದ ನಟ ಸುರೇಂದ್ರ ಬಂಟ್ವಾಳ್ ಹಣಕಾಸು ವ್ಯವಹಾರ ಮಾಡುತ್ತಿದ್ದರು. ಹಣಕಾಸು ವಿಚಾರಕ್ಕೆ ಜೊತೆಗಿದ್ದ ವ್ಯಕ್ತಿಗಳು ಬಂಟ್ವಾಳ್ ಅವರನ್ನು ಹತ್ಯೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಕನ್ನಡ ಚಿತ್ರ ಸವರ್ಣದೀರ್ಘ ಸಂಧಿ ಸೇರಿದಂತೆ ಹಲವು ತುಳು ಚಿತ್ರಗಳಲ್ಲಿ ನಟಿಸಿದ್ದ ಸುರೇಂದ್ರ ಬಂಟ್ವಾಳ್ ಕಳೆದ 2018ರ ಜೂನ್‌ನಲ್ಲಿ ಪ್ರಕರಣವೊಂದರಲ್ಲಿ ಜೈಲು ಸೇರಿದ್ದರು.

ಬಂಟ್ವಾಳ ಪೇಟೆಯಲ್ಲಿ ತಲವಾರು ಹಿಡಿದು ಬಿಜೆಪಿ ಕಾರ್ಯಕರ್ತರಿಗೆ ಬಂಟ್ವಾಳ್ ಬೆದರಿಕೆ ಹಾಕಿದ್ದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ‌ಮೇಲೆ ಸುರೇಂದ್ರ ಹೊರಬಂದಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top