fbpx
ಸಮಾಚಾರ

ಬಿಗ್‌ಬಾಸ್ ಖ್ಯಾತಿಯ ಆಡಂ ಪಾಷಾ ಬಂಧನ

ಮಾದಕವಸ್ತು ಮಾರಾಟ, ಸಾಗಣೆ ಮತ್ತು ಬಳಕೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿರುವ ನಾರ್ಕೋಟಿಕ್ಸ್‌ ಕಂಟ್ರೋಲ್‌ ಬ್ಯುರೋ (ಎನ್‌ಸಿಬಿ) ಅಧಿಕಾರಿಗಳು, ‘ಬಿಗ್‌ ಬಾಸ್‌ ಕನ್ನಡ ಸೀಸನ್‌ 6’ರ ಸ್ಪರ್ಧಿ ಆದಂ ಪಾಷನನ್ನು ಬಂಧಿಸಿದ್ದಾರೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭದಲ್ಲಿ ಬೆಂಗಳೂರು ನಗರದಲ್ಲಿ ಬಂಧನಕ್ಕೆ ಒಳಗಾಗಿದ್ದ ಅನಿಕಾ ಳಿಂದ ಮಾದಕ ವಸ್ತುವನ್ನು ಆಡಂ ಪಾಷಾ ಖರೀದಿಸಿದ್ದಾರೆ ಎಂಬ ಆರೋಪದ ಮೇಲೆ ಎನ್‌ಸಿಬಿ ಅಧಿಕಾರಿಗಳು ಆಡಂ ಪಾಷಾ ಅನ್ನು ಬಂಧಿಸಿದ್ದಾರೆ.

ಡ್ರಗ್ಸ್ ಜಾಲದ ಪ್ರಮುಖ ಆರೋಪಿ ಕೇರಳದ ಡಿ. ಅನಿಕಾ ಎಂಬುವರನ್ನು ಎನ್‌ಸಿಬಿ ಅಧಿಕಾರಿಗಳು ಬಂಧಿಸಿದ್ದರು. ಆಕೆ ನೀಡಿದ್ದ ಹೇಳಿಕೆ ಆಧರಿಸಿ ತನಿಖೆ ಮುಂದುವರಿಸಿರುವ ಅಧಿಕಾರಿಗಳು, ಪ್ರಕರಣದ ವಿಚಾರಣೆಗೆ ಬರುವಂತೆ ಆಡಂ ಪಾಷಾಗೆ ಇತ್ತೀಚೆಗಷ್ಟೇ ನೋಟಿಸ್ ನೀಡಿದ್ದರು.

ನಗರದಲ್ಲಿರುವ ಎನ್‌ಸಿಬಿ ಕಚೇರಿಗೆ ಮಂಗಳವಾರ ಬೆಳಿಗ್ಗೆ ಹಾಜರಾಗಿದ್ದ ಆಡಂ, ಸಂಜೆಯವರೆಗೂ ವಿಚಾರಣೆ ಎದುರಿಸಿದರು. ಪ್ರಕರಣದಲ್ಲಿ ಸಂಗ್ರಹಿಸಿದ್ದ ಪುರಾವೆಗಳನ್ನು ಮುಂದಿಟ್ಟುಕೊಂಡು ಅಧಿಕಾರಿಗಳು ವಿಚಾರಣೆ ನಡೆಸಿ ಅರೆಸ್ಟ್ ಮಾಡಲಾಗಿದೆ.

ಈಗಾಗಲೇ ಮಾದಕ ಜಾಲದ ನಂಟು ಆರೋಪದಡಿ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಅಲ್ಲದೇ, ಈಗಾಗಲೇ ಸ್ಯಾಂಡಲ್ ವುಡ್ ನಟ ದಿಗಂತ್ ಹಾಗೂ ಐಂದ್ರಿತಾ ರೈ, ನಿರೂಪಕಿ ಅನುಶ್ರೀ ಸೇರಿ ಕೆಲ ಕಿರುತೆರೆ ಕಲಾವಿದರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top