fbpx
ಸಮಾಚಾರ

ಭಾರತೀಯ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್​ಗೆ ಹೃದಯಾಘಾತ!

ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು ಇಲ್ಲಿನ ಖಾಸಗೀ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದಾರೆ. ಸದ್ಯ 61 ವರ್ಷದ ಕಪಿಲ್ ದೇವ್ ಅವರಿಗೆ ಆಂಜಿಯೋ ಪ್ಲಾಸ್ಟಿ ಚಿಕಿತ್ಸೆ ನೀಡಲಾಗಿತ್ತಿದೆ.

ಕಪಿಲ್‌ ದೇವ್‌ ಅವರಿಗೆಗೆ ಹೃದಯಾಘಾತವಾಗಿರುವ ವಿಚಾರವನ್ನು ಖ್ಯಾತ ಪತ್ರಕರ್ತೆ ಟೀನಾ ಠಾಕರ್ ತಮ್ಮ ಟ್ವಿಟರ್‌ನಲ್ಲಿ ಹಾಕಿಕೊಂಡಿದ್ದಾರೆ. ಟೀನಾ ಥಾಕರ್ ಈ ಬಗ್ಗೆ ಖಚಿತಪಡಿಸಿದ್ದು, ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ.

1959ರ ಜನವರಿ 6ರಂದು ಚಂಡೀಗಢದಲ್ಲಿ ಜನಿಸಿದ್ದ ಕಪಿಲ್ ದೇವ್, 1978ರಲ್ಲಿ ಪಾಕಿಸ್ಥಾನ ವಿರುದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು. 1983ರಲ್ಲಿ ವೆಸ್ಟ್ ಇಂಡೀಸ್ ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ನಲ್ಲಿ ಕಪಿಲ್ ದೇವ್ ನಾಯಕತ್ವದ ಭಾರತ ತಂಡ ಮೊದಲ ಬಾರಿಗೆ ವಿಶ್ವಕಪ್ ಎತ್ತಿ ಹಿಡಿದಿತ್ತು. ಫೈನಲ್ ಪಂದ್ಯದಲ್ಲಿ ಭಾರತ ಬಲಿಷ್ಠ ವೆಸ್ಟ್ ಇಂಡೀಸ್ ವಿರುದ್ಧ ರೋಚಕ ಜಯ ಸಾಧಿಸಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top