fbpx
ಸಮಾಚಾರ

ನವೆಂಬರ್ 17ರಿಂದ ಕಾಲೇಜುಗಳು ಆರಂಭ: ಸರ್ಕಾರ ನಿರ್ಧಾರ

ಕರ್ನಾಟಕದ ಎಲ್ಲ ಡಿಗ್ರಿ ಮತ್ತು ಇಂಜಿನಿಯರಿಂಗ್ ಕಾಲೇಜುಗಳನ್ನು ನವೆಂಬರ್ 17ರಿಂದ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಶಾಲಾ-ಕಾಲೇಜುಗಳ ಪುನರಾರಂಭದ ಬಗ್ಗೆ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಕಾಲೇಜುಗಳ ಪುನರಾರಂಭದ ದಿನಾಂಕವನ್ನು ಘೋಷಿಸಿದೆ. ನವೆಂಬರ್ 17ರಿಂದ ಇಂಜಿನಿಯರಿಂಗ್, ಪದವಿ, ಡಿಪ್ಲೊಮಾ ಕಾಲೇಜುಗಳು ಆರಂಭಿಸಲಾಗಲಿವೆ.

ಇಂದು ಸಿಎಂ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ಕರೆಯಲಾಗಿದ್ದು, ಈ ಸಭೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ ಕಾಲೇಜು ಪ್ರಾರಂಭ ಮಾಡುವುದಾಗಿ ನಿರ್ಣಯಿಸಲಾಗಿದೆ. ಮಾರ್ಗಸೂಚಿ ಪಾಲನೆಯನ್ನು ಕಾಲೇಜು ಶಿಕ್ಷಣ ಇಲಾಖೆಗೆ ಹೆಗಲಿಗೆ ಹಾಕಲಾಗಿದೆ. ಮಾರ್ಗಸೂಚಿ ಪಾಲನೆಗೆ ಅಗತ್ಯ ಕ್ರಮವಹಿಸಿ ಎಂದು ಸಿಎಂ ಸೂಚನೆ ನೀಡಿದ್ದಾರೆ. ನವೆಂಬರ್ 17 ರಿಂದ ಎಂಜಿನಿಯರಿಂಗ್, ಡಿಪ್ಲೊಮಾ, ಪದವಿ ಕಾಲೇಜು ಪ್ರಾರಂಭ ಮಾಡವುದಾಗಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಕಾಲೇಜಿಗೆ ಬಂದು ಪಾಠ ಕೇಳುವುದು ವಿದ್ಯಾರ್ಥಿಗಳ ಇಚ್ಛೆಗೆ ಬಿಟ್ಟಿರುತ್ತದೆ. ಸ್ವಯಂ ಪ್ರೇರಣೆಯಿಂದ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಬಹುದು. ಅದಕ್ಕೆ ಅವರು ಒಪ್ಪಿಗೆ ಪತ್ರವನ್ನು ನೀಡಬೇಕು. ವಿದ್ಯಾರ್ಥಿಗಳು ಮತ್ತು ಪೋಷಕರು ಒಪ್ಪಿಗೆ ಇದ್ದರೆ ಮಾತ್ರ ಕಾಲೇಜಿಗೆ ಬರಬಹುದು. ಯಾರಿಗೂ ಕಾಲೇಜಿಗೆ ಬರುವಂತೆ ಬಲವಂತ ಮಾಡುವುದಿಲ್ಲ ಎಂದು ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top