fbpx
ಸಮಾಚಾರ

ನಟ ವಿನೋದ್ ಪ್ರಭಾಕರ್​ಗೆ ಕಾಂಗ್ರೆಸ್ ಪಕ್ಷ ಸೇರಲು ಆಫರ್ ಕೊಟ್ಟ ಡಿ.ಕೆ ಶಿವಕುಮಾರ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ರಾಜರಾಜೇಶ್ವರಿ ನಗರದಲ್ಲಿರುವ ಚಿತ್ರನಟ ವಿನೋದ್ ಪ್ರಭಾಕರ್ ಅವರ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿ ಮಾತುಕತೆ ನಡೆಸಿ, ಅವರ ಮನೆಯಲ್ಲೇ ಮಧ್ಯಾಹ್ನದ ಊಟ ಸವಿದರು. ರಾಜರಾಜೇಶ್ವರಿ ನಗರದಲ್ಲಿ ಚುನಾವಣೆ ಇರುವ ಕಾರಣಕ್ಕಾಗಿ ಅವರು ವಿನೋದ್ ಪ್ರಭಾಕರ್ ಮನೆಗೆ ತೆರಳಿ ಮತಯಾಚನೆ ಮಾಡಿದ್ದಾರೆ.

ಎಲೆಕ್ಷನ್ ಪ್ರಚಾರಕ್ಕೆ ಬರುವಂತೆ ವಿನೋದ್ ಪ್ರಭಾಕರ್ ಅವರಿಗೆ ಡಿಕೆಶಿ ಆಹ್ವಾನ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಜೊತೆಗೆ ಪಕ್ಷಕ್ಕೆ ಸೇರುವಂತೆಯೂ ಡಿ.ಕೆ. ಶಿವಕುಮಾರ್ ಆಫರ್ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದಲ್ಲೂ ಸ್ಥಾನಮಾನ ನೀಡುವ ಬಗ್ಗೆ ಚರ್ಚೆ ಮಾಡಲಾಗಿದೆ ಎನ್ನಲಾಗಿದೆ.

ಡಿಕೆ ಶಿವಕುಮಾರ್ ಅವರ ಆಹ್ವಾನದ ಮೇರೆಗೆ ವಿನೋದ್ ಪ್ರಭಾಕರ್ ಅವರು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ವಿನೋದ್ ಪ್ರಭಾಕರ್ ಜೊತೆ ಸುಮಾರು ಒಂದು ಗಂಟೆಗೂ ಅಧಿಕ ಸಮಯ ಮಾತುಕತೆ ನಡೆಸಿದ ಡಿಕೆ ಶಿವಕುಮಾರ್ ಅವರು ಬಳಿಕ ಭೋಜನ ಸವಿದರು.

ಸದ್ಯ ಸಿನಿಮಾಗಳಲ್ಲಿ ಬ್ಯುಸಿಯಿರುವ ಮರಿ ಟೈಗರ್‌, ಡಿಕೆಶಿ ಬಳಿ ಕಾಲಾವಕಾಶ ಕೇಳಿದ್ದಾರೆ. ಸ್ವಲ್ಪ ಸಮಯದಲ್ಲಿ ಯೋಚನೆ ಮಾಡಿ ಪ್ರಚಾರಕ್ಕೆ ಮಾತ್ರ ಹೋಗುವುದಾ ಅಥವಾ ಪಕ್ಷದಲ್ಲೇ ಸಕ್ರಿಯರಾಗುವುದಾ ಅಥವಾ ಸಿನಿಮಾನೇ ಸಾಕು ರಾಜಕೀಯದಿಂದ ದೂರವೇ ಇರುವುದಾ ಎಂಬುದರ ಬಗ್ಗೆ ಸದ್ಯ ಯೋಚಿಸುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top