fbpx
ಸಮಾಚಾರ

ಚುನಾವಣಾ ಕಣದಿಂದ ಹಿಂದೆ ಸರಿದ ಜೆಡಿಎಸ್ ಅಭ್ಯರ್ಥಿ: ಪಕ್ಷೇತರ ಅಭ್ಯರ್ಥಿಗೆ ಜೆಡಿಎಸ್ ಬೇಷರತ್ ಬೆಂಬಲ

ಒಂದು ವರ್ಷದಿಂದ ಪ್ರಚಾರದಲ್ಲಿ ತೊಡಗಿದ್ದ ಜೆಡಿಎಸ್‌ ಅಧಿಕೃತ ಅಭ್ಯರ್ಥಿ ಶಿವಶಂಕರ ಕಲ್ಲೂರು ಶುಕ್ರವಾರ ಪಶ್ಚಿಮ ಪದವೀಧರ ಮತ ಕ್ಷೇತ್ರದಿಂದ ನಿವೃತ್ತಿ ಘೋಷಿಸಿದ್ದು, ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಅವರಿಗೆ ಬೇಷರತ್ತು ಬೆಂಬಲ ನೀಡಿದ್ದಾರೆ.

ಹೂಬಳ್ಳಿಯ ಖಾಸಗಿ ಹೋಟೆಲ್‌ವೊಂದರಲ್ಲಿ ವಿಧಾನ ಪರಿಷತ್‌ ಹಿರಿಯ ಸದಸ್ಯ ಬಸವರಾಜ ಹೊರಟ್ಟಿಅವರ ಸಮ್ಮುಖದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಕ್ಷೇತರ ಅಭ್ಯರ್ಥಿಗೆ ಮಾಲಾರ್ಪಣೆ ಮಾಡಿ ಶಿವಶಂಕರ ಕಲ್ಲೂರು ನಿವೃತ್ತಿಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ.

“ಚುನಾವಣೆ ದಿನಾಂಕ ಪ್ರಕಟವಾದ ಮೇಲೆ ಮತದಾರರನ್ನು ಭೇಟಿ ಮಾಡಲು ನಮಗೆ ಸಾಧ್ಯವಾಗಲಿಲ್ಲ. ಕಾಂಗ್ರೆಸ್, ಬಿಜೆಪಿಯಿಂದ ಅಂತರ ಕಾಪಾಡಿಕೊಳ್ಳಲು ಪಕ್ಷೇತರ ಅಭ್ಯರ್ಥಿಗೆ ಬೆಂಬಲಿಸುತ್ತಿದ್ದೇವೆ. ಇದರಿಂದ ಪಕ್ಷಕ್ಕೆ ಯಾವುದೇ ಡ್ಯಾಮೇಜ್ ಆಗುವುದಿಲ್ಲ. ಪಕ್ಷೇತರ ಅಭ್ಯರ್ಥಿ ಬಸವರಾಜ್ ಗುರಿಕಾರ್‌ಗೆ ಜೆಡಿಎಸ್ ಬೆಂಬಲ ನೀಡಿದೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕಣ್ಣೀರು ಹಾಕಿದ ಅಭ್ಯರ್ಥಿ!
ಸುದ್ದಿಗೋಷ್ಠಿಯ ನಂತರ ನಡೆದ ಜೆಡಿಎಸ್ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಅಭ್ಯರ್ಥಿ ಶಿವಶಂಕರ ಕಲ್ಲೂರ ಕಣ್ಣೀರು ಹಾಕಿದ ಘಟನೆ ನಡೆಯಿತು. ಇದನ್ನು ನಾನು ನಿರೀಕ್ಷೆ ಮಾಡಿರಲಿಲ್ಲ. ಒಂದು ವರ್ಷದಿಂದ ಕೆಲಸ ಮಾಡಿದ್ದೇನೆ. ಆದರೆ ಪಕ್ಷದ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ. ಪಕ್ಷದ ತೀರ್ಮಾನದಂತೆ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ವ್ಯಕ್ತಪಡಿಸುವಂತೆ ಕೋರಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top