fbpx
ಸಮಾಚಾರ

ಐಪಿಎಲ್‌ನಲ್ಲಿ ಮತ್ತೊಂದು ದಾಖಲೆ ಬರೆದ ಕೊಹ್ಲಿ

ಚೆನ್ನೈ ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ ನಾಯಕ ವಿರಾಟ್‌ ಕೊಹ್ಲಿ ಸಿಕ್ಸ್‌ ಸಿಡಿಸುವ ಮೂಲಕ ಐಪಿಎಲ್‌ನಲ್ಲಿ ದಾಖಲೆ ಬರೆದಿದ್ದಾರೆ. ಕೊಹ್ಲಿ ಹೊಡೆದಿದ್ದು 200ನೇ ಸಿಕ್ಸ್‌. ಈ ಮೂಲಕ ಐಪಿಎಲ್‌ ಇತಿಹಾಸದಲ್ಲಿ ಒಂದೇ ತಂಡದ ಪರವಾಗಿ ಆಡಿ 200 ಸಿಕ್ಸ್‌ ಸಿಡಿಸಿದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರವಾಗಿದ್ದಾರೆ.

ಈ ದಾಖಲೆಯನ್ನು ಬರೆದ ಭಾರತದ ಮೂರನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇನ್ನು ಕೊಹ್ಲಿಗಿಂತ ಮುಂಚಿತವಾಗಿ ಈ ಸಾಧನೆಗೈದ ಭಾರತೀಯ ಕ್ರಿಕೆಟರುಗಳೆಂದರೆ ಮಹೇಂದ್ರ ಸಿಂಗ್ ಧೋನಿ (216) ಹಾಗೂ ರೋಹಿತ್ ಶರ್ಮಾ (209).

ಹಾಗೆಯೇ ಐಪಿಎಲ್​ ಇತಿಹಾಸದಲ್ಲೇ ಅತೀ ಹೆಚ್ಚು ಸಿಕ್ಸರ್‌ಗಳನ್ನು ಸಿಡಿಸಿದ ದಾಖಲೆ ಸ್ಪೋಟಕ ಆಟಗಾರ ಕ್ರಿಸ್‌ ಗೇಲ್‌ (336) ಹೆಸರಲ್ಲಿದೆ. ನಂತರದ ಸ್ಥಾನದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಹೊಡಿಬಡಿ ದಾಂಡಿಗ ಎಬಿ ಡಿ’ವಿನಲಿಯರ್ಸ್‌ (231) ಇದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top