fbpx
ಸಮಾಚಾರ

ಹಿರಿಯ ನಟ ದತ್ತಣ್ಣ ಅವರ ಸಹೋದರ ಸೋಮಣ್ಣ ವಿಧಿವಶ

ಸಾಹಿತ್ಯ, ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆ ಕ್ಷೇತ್ರಗಳಲ್ಲಿ ಆಸಕ್ತಿ ಹೊಂದಿದ್ದ, ಬ್ಯಾಂಕ್ ಅಧಿಕಾರಿಯಾಗಿದ್ದ ಎಚ್‌ಜಿ ಸೋಮಶೇಖರರಾಯರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಇಂದು ಮಧ್ಯಾಹ್ನ 12.30ಕ್ಕೆ ಅವರು ನಿಧನರಾಗಿದ್ದಾರೆ. ಇವರು ದತ್ತಣ್ಣ ಅವರ ಸಹೋದರರು.

ಬ್ಯಾಂಕ್ ಅಧಿಕಾರಿಯಾಗಿದ್ದ ಸೋಮಣ್ಣನವರಿಗೆ ಸಾಹಿತ್ಯ, ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆ ಕ್ಷೇತ್ರಗಳಲ್ಲಿ ಆಸಕ್ತಿ ಹೊಂದಿದ್ದರು. ಇವರು ಅನೇಕ ಪಾಶ್ಚಿಮಾತ್ಯ ಮತ್ತು ಭಾರತೀಯ ನಾಟಕಕರ್ತೃಗಳ ಕೃತಿಗಳನ್ನು ರಂಗಭೂಮಿಯ ಮೇಲೆ ಜೀವಂತಗೊಳಿಸಿದ್ದರು.

1981ರಲ್ಲಿ, ಟಿ.ಎಸ್.ರಂಗಾರವರ ನಿರ್ದೇಶನದ ‘ಸಾವಿತ್ರಿ’ಮೂಲಕ. ಖ್ಯಾತ ನಟ ಅನಿಲ್ ಠಕ್ಕರ್ರವರ ಪ್ರತಿದ್ವಂದಿಯಾಗಿ ಇವರು ನೀಡಿದ ಅಭಿನಯ ಪ್ರೇಕ್ಷಕರ ಮೆಚ್ಚುಗೆ ಗಳಿಸಿತು. ನಂತರ ಸೋಮಣ್ಣ ಅನೇಕ ಚಿತ್ರಗಳಲ್ಲಿ ಭಾವಪ್ರಧಾನ ಮತ್ತು ಹಾಸ್ಯಪ್ರಧಾನ ಪಾತ್ರಗಳನ್ನು ನಿರ್ವಹಿಸಿದರು.

ರವಿ ನಿರ್ದೇಶನದ ‘ಮಿಥಿಲೆಯ ಸೀತೆಯರು’ಇವರ ಅಭಿನಯ ಸಾಮರ್ಥ್ಯವನ್ನು ಸರಿಯಾಗಿ ಗುರುತಿಸುವಂತೆ ಮಾಡಿತು. ರವಿಯವರೇ ನಿರ್ದೇಶಿಸಿದ ಇನ್ನೊಂದು ಚಿತ್ರ ‘ಹರಕೆಯ ಕುರಿ’ಯಲ್ಲಿ ಸೋಮಶೇಖರರಾಯರು ಮಾಡಿದ ಸೊಗಸಾದ ಅಭಿನಯಕ್ಕಾಗಿ 1992 -93ನೇ ಸಾಲಿನ ರಾಜ್ಯ ಸರ್ಕಾರದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಲಭಿಸಿತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top