fbpx
ಸಮಾಚಾರ

ಕರ್ನಾಟಕದಲ್ಲೂ ದೀಪಾವಳಿಗೆ ಪಟಾಕಿ ನಿಷೇಧ?

ದೀಪಾವಳಿಗೆ ರಾಜ್ಯದಲ್ಲೂ ಪಟಾಕಿ ನಿಷೇಧ ಆಗುತ್ತಾ ಎಂಬ ಪ್ರಶ್ನೆಯೊಂದು ಮೂಡಿದ್ದು, ಇಂದು ಆರೋಗ್ಯ ಇಲಾಖೆಗೆ ಶಿಫಾರಸು ಮಾಡುವ ಸಾಧ್ಯತೆಗಳಿವೆ.

ದೀಪಾವಳಿಯಲ್ಲಿ ಪಟಾಕಿಯಿಂದ ಉಂಟಾಗುವ ಹೊಗೆಯಿಂದ ಕೊರೊನಾ ಸೋಂಕು ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ತಜ್ಞರ ಸಮಿತಿ ರಚಿಸಲಾಗಿದೆ. ಈ ಸಮಿತಿ ವರದಿ ಆಧಾರಿಸಿ ಪಟಾಕಿ ನಿಷೇಧಿಸುವ ಸಂಬಂಧ ತೀರ್ಮಾನ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ರವರು ತಿಳಿಸಿದ್ದಾರೆ.

ಪಟಾಕಿ ಸೃಷ್ಟಿಸುವ ವಾಯು ಮಾಲಿನ್ಯ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಲು ಕಾರಣ ಆಗಬಹುದು. ಈ ನಿಟ್ಟಿನಲ್ಲಿ ಪಟಾಕಿ ನಿಷೇಧ ಮಾಡುವುದು ಉತ್ತಮ ಎಂಬ ಸಲಹೆಗಳು ಸರ್ಕಾರಕ್ಕೆ ತಜ್ಞರು ನೀಡಿದ್ದಾರೆ. ತಜ್ಞರ ಸಲಹೆಗಳನ್ನು ಪರಿಗಣಿಸಿ ಪಟಾಕಿ ನಿಷೇಧದ ಕುರಿತಾಗಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಸೂಕ್ತ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಜಸ್ಥಾನದಲ್ಲಿ ಈಗಾಗಲೇ ಪಟಾಕಿ ನಿಷೇಧ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ದೆಹಲಿ ಸರ್ಕಾರ ಕಡಿಮೆ ಮಾಲಿನ್ಯ ಉಂಟುಮಾಡುವ ಪಟಾಕಿಗಳನ್ನಷ್ಟೇ ಉಪಯೋಗ ಮಾಡಲು ಅನುಮತಿ ನೀಡಿದೆ. ಈ ನಿಟ್ಟಿನಲ್ಲಿ ಕರ್ನಾಟಕದಲ್ಲೂ ಪಟಾಕಿ ನಿಷೇಧದ ಕುರಿತಾಗಿ ಚಿಂತನೆ ನಡೆಸಲಾಗುತ್ತಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top