fbpx
ಸಮಾಚಾರ

IBPS ನೇಮಕಾತಿ: 647 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್) 2020ನೇ ಸಾಲಿನ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿದೆ. ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತಂತೆ ವೆಬ್ ತಾಣದಲ್ಲಿ ಅಧಿಕೃತವಾಗಿ ಪ್ರಕಟಿಸಲಾಗಿದೆ. 647 ಹುದ್ದೆಗಳಿಗೆ ಅರ್ಹರಾದ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ನವೆಂಬರ್ 23ರೊಳಗೆ ಸಲ್ಲಿಸಬಹುದು.

ವಿದ್ಯಾರ್ಹತೆ ಏನಿರಬೇಕು:
ವಿಶೇಷ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ, ಸ್ನಾತಕೋತ್ತರ ಪದವಿ, ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.

ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳಿಗೆ: ಕನಿಷ್ಟ 20 ರಿಂದ ಗರಿಷ್ಟ 30 ವರ್ಷ
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ,ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಮಾಜಿ ಸೈನಿಕ ಅಭ್ಯರ್ಥಿಗೆ 8 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

ಅರ್ಜಿ ಶುಲ್ಕ
ಸಾಮಾನ್ಯ ಅಭ್ಯರ್ಥಿಗಳಿಗೆ ರೂ 850/-
ಎಸ್ಸಿ ಎಸ್ಟಿ ಅಂಗವಿಕಲ ಅಭ್ಯರ್ಥಿಗಳಿಗೆ ರೂ 175/-

ಆಯ್ಕೆ ವಿಧಾನ
ಆನ್ಲೈನ್ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶದ ಮೂಲಕ ನೇಮಕಾತಿ ನಡೆಯಲಿದೆ.

ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹಾಗೂ ಇನ್ನಿತರ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top