fbpx
ಸಮಾಚಾರ

ರಾಜ್ಯದಲ್ಲಿ ದೀಪಾವಳಿಗೆ ಪಟಾಕಿ ಸಂಪೂರ್ಣ ನಿಷೇಧ: ಸಿಎಂ ಯಡಿಯೂರಪ್ಪ ಆದೇಶ

ಮಹಾಮಾರಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈ ಬಾರಿ ದೀಪಾವಳಿಗೆ ಪಟಾಕಿಯನ್ನು ನಿಷೇಧ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ರಾಜ್ಯದಲ್ಲೂ ಸಂಪೂರ್ಣವಾಗಿ ಪಟಾಕಿ ನಿಷೇಧಿಸಿ ಆದೇಶ ಹೊರಡಿಸಲಾಗುವುದು. ಯಾವುದೇ ರೀತಿಯ ಪಟಾಕಿಗಳನ್ನೂ ಮಾರಾಟ ಮಾಡಲು ಅವಕಾಶವಿಲ್ಲ. ಈ ಸಂಬಂಧ ಎಲ್ಲ ಜಿಲ್ಲಾಧಿಕಾರಿಗಳಿಗೂ ಆದೇಶ ಹೊರಡಿಸಲಾಗುವುದು” ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಹೋಂ ಐಸೋಲೇಷನ್‌ನಲ್ಲಿರುವ ಕೋವಿಡ್‌ ರೋಗಿಗಳಿಗೆ ಪಟಾಕಿ ಹೊಗೆಯಿಂದ ಹಾಗೂ ಅದು ಸೃಷ್ಟಿಸುವ ವಾಯು ಮಾಲಿನ್ಯದಿಂದ ಆರೋಗ್ಯದಲ್ಲಿ ತೀವ್ರ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ತಜ್ಞ ವೈದ್ಯರು ಪಟಾಕಿ ನಿಷೇಧಿಸುವಂತೆ ಸಲಹೆ ನೀಡಿದ್ದರು. ತಜ್ಞರ ಸಲಹೆಗೆ ಒಪ್ಪಿಗೆ ಸೂಚಿಸಿದ ಸರ್ಕಾರ ಇದೀಗ ಪಟಾಕಿ ನಿಷೇಧ ಮಾಡಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top