fbpx
ಸಮಾಚಾರ

“ಪಟಾಕಿಯಿಂದ ಮಾಲಿನ್ಯ ಆಗುತ್ತೆ ಅನ್ನೋದು ಸುಳ್ಳು, ಪಟಾಕಿ ಬ್ಯಾನ್ ಮಾಡೋದು ಸರಿಯಲ್ಲ” ಪ್ರಮೋದ್ ಮುತಾಲಿಕ್ ಆಕ್ರೋಶ

“ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ನಿಷೇದ ಮಾಡುವುದು ಸರಿಯಲ್ಲ. ಪಟಾಕಿಯಿಂದಲೇ ಪರಿಸರ ಮಾಲಿನ್ಯ ಆಗುತ್ತೆ ಎಂಬುವುದು ಸುಳ್ಳು” ಎಂದು ಶ್ರೀರಾಮ ಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುತಾಲಿಕ್, “ದೀಪಾವಳಿ ಹಬ್ಬದ ಸಂದರ್ಭದಲ್ಲಿ ಧಾರ್ಮಿಕ ವಿಧಿ ವಿಧಾನದಿಂದ ಆಚರಣೆಗಳು ನಡೆಯುವ ಕಾರಣ ಪಟಾಕಿಯನ್ನು ಬ್ಯಾನ್ ಮಾಡಬಾರದು.” ಎಂದು ಆಗ್ರಹಿಸಿದರು.

“ಪಟಾಕಿಯಿಂದ ಮಾತ್ರ ಪರಿಸರ ಮಾಲಿನ್ಯ ಆಗುತ್ತಿದೆ ಎಂಬುದು ಸುಳ್ಳು. ಇವತ್ತು ವಾಹನಗಳಿಂದ ಎಷ್ಟು ಪರಿಸರ ಮಾಲಿನ್ಯ ಆಗುತ್ತಿದೆ ಅದನ್ನು ಯಾರು ತಡೆಯುವ ಪ್ರಯತ್ನ ಮಾಡುವುದಿಲ್ಲ. ಆದರೆ ವರ್ಷಕ್ಕೊಮ್ಮೆ ನಡೆಯುವ ಗಣೇಶ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ನಿಷೇಧ ಮಾಡುವುದು ಎಷ್ಟು ಸರಿ” ಎಂದು ಪ್ರಶ್ನೆ ಮಾಡಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top