fbpx
ಸಮಾಚಾರ

ಹಸಿರು ಪಟಾಕಿಗೆ ನಿಷೇಧವಿಲ್ಲ ಎಂದ ಸರ್ಕಾರ

ಈ ಬಾರಿಯ ದೀಪಾಳಿ ಹಬ್ಬದಲ್ಲಿ ಹಸಿರು ಪಟಾಕಿ ಹಚ್ಚಲು ಮಾತ್ರ ಅವಕಾಶ ನೀಡಿದೆ. ಈ ವಿಚಾರವಾಗಿ ಮಾಧ್ಯಮ ಪ್ರಕಟನೆ ಹೊರಡಿಸಿರುವ ರಾಜ್ಯ ಸರ್ಕಾರ ಹೆಚ್ಚು ಶಬ್ದವಲ್ಲದ, ಮಾಲಿನ್ಯವಲ್ಲದ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಿದೆ.

ಕೊರೋನಾ ಸೋಂಕನ್ನು ನಿಯಂತ್ರಿಸುವ ಉದ್ದೇಶದಿಂದ ಸಾರ್ವಜನಿಕರ ಮತ್ತು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ದೀಪಾವಳಿ ಹಬ್ಬವನ್ನು ಸರಳವಾಗಿ, ಅರ್ಥಗರ್ಭಿತವಾಗಿ ಹಾಗೂ ಭಕ್ತಿಪೂರ್ವಕವಾಗಿ ಆಚರಿಸುವುದು ಸೂಕ್ತ. ಈ ಹಿನ್ನೆಲೆಯಲ್ಲಿ ಹಸಿರು ಪಟಾಕಿಯನ್ನು ಮಾತ್ರ ಬಳಸಿ ದೀಪಾವಳಿಯನ್ನು ಸರಳ ಹಾಗೂ ಸುಂದರವಾಗಿ ಆಚರಿಸಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮನವಿ ಮಾಡಿಕೊಂಡಿದ್ದಾರೆ.

ವಾಸ್ತವವಾಗಿ ಶುಕ್ರವಾರ ಮಧ್ಯಾಹ್ನ ಸುದ್ದಿಗಾರರೊಂದಿಗೆ ಮಾತನಾಡಿ ಯಡಿಯೂರಪ್ಪ ಅವರು, ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ದೀಪಾವಳಿಯಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸುವ ತೀರ್ಮಾನಕ್ಕೆ ಬರಲಾಗಿದೆ. ಈ ಸಂಬಂಧ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದರು. ಆದರೆ, ಸಾರ್ವಜನಿಕವಲಯದಲ್ಲಿ ಟೀಕೆ ಟಿಪ್ಪಣಿ ಕಳಿ ಬಂದಿದ್ದರಿಂದ ಸಂಜೆ ವೇಳೆ ತಮ್ಮ ನಿಲುವನ್ನು ಬದಲಿಸಿಕೊಂಡ ಅವರು, ಹಸಿರು ಪಟಾಕಿಯನ್ನು ಮಾತ್ರ ಬಳಸಬಹುದು ಎಂದು ಲಿಖಿತ ಹೇಳಿಕೆ ನೀಡಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top