fbpx
ಸಮಾಚಾರ

RR ನಗರ ಉಪ ಚುನಾವಣೆ: ಸೋಲಿನ ನಂತರ ಕುಸುಮ ಮೊದಲ ಪ್ರತಿಕ್ರಿಯೆ

ಹಲವು ಕುತೂಹಲಗಳಿಗೆ ಕಾರಣವಾಗಿದ್ದ ರಾಜರಾಜೇಶ್ವರಿ ನಗರ ಉಪಚುನಾವಣೆಯ ಫಲಿತಾಂಶ ಕೊನೆಗೂ ಹೊರಬಿದ್ದಿದೆ. ಬಿಜೆಪಿ ಟಿಕೆಟ್ ನಿಂದ ಸ್ಪರ್ಧಿಸಿದ್ದ ಮುನಿರತ್ನ ಅವರು ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಬಗ್ಗೆ ಪರಾಜಿತ ಅಭ್ಯರ್ಥಿ ಕುಸುಮ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

 

 

ಈ ಬಗ್ಗೆ ತಮ್ಮ ಫೇಸ್ಬುಕ್ ಮತ್ತು ಟ್ವಿಟರ್ ಖಾತೆಗಳಲ್ಲಿ ಪ್ರತಿಕ್ರಿಯೆ ನೀಡಿರುವ ಕುಸುಮಾ ಅವರು ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ, ಜನರು ಕೊಟ್ಟಿರುವ ತೀರ್ಪನ್ನು ತಲೆಬಾಗಿ ಸ್ವೀಕರಿಸುತ್ತೇನೆಂದು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಸಂದೇಶ ರವಾನಿಸಿರುವ ಕುಸುಮಾ, “ಕಾಂಗ್ರೆಸ್‌ ಪಕ್ಷದ ಮೂಲಕ ನನ್ನನ್ನು ಬೆಂಬಲಿಸಿದ ನಿಮಗೆ. ಹೃದಯಪೂರ್ವಕ ಧನ್ಯವಾದಗಳು. ಮತಯಾಚನೆಗೆ ಮನೆಬಾಗಿಲಿಗೆ ಬಂದಾಗ ಮನೆಮಗಳಂತೆ ಬರಮಾಡಿಕೊಂಡು ಕುಂಕುಮ ಇಟ್ಟು, ಹೂ ಮುಡಿಸಿ, ಉಡಿ ತುಂಬಿ ನೀವು ತೋರಿದ ಪ್ರೀತಿಗೆ ಖುಣಿಯಾಗಿದ್ದೇನೆ.”

“ನಮ್ಮ ರಾಜರಾಜೇಶ್ವರಿ ನಗರ ಕ್ಷೇತ್ರ ಎಂದೆಂದಿಗೂ ನನ್ನ ಕರ್ಮಭೂಮಿ. ಎಂದಿನಂತೆ ನಿಮ್ಮೊಂದಿಗಿದ್ದು, ನನ್ನ ಸಮಾಜ ಸೇವಾ ಕಾರ್ಯಗಳನ್ನು ಮುಂದುವರಿಸುವ ಮೂಲಕ ನೊಂದವರ ದನಿಯಾಗುತ್ತೇನೆ” ಎಂದು ತಿಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top