fbpx
ಸಮಾಚಾರ

ಗೆಲುವಿನ ಸಂಭ್ರಮದಲ್ಲಿದ್ದ ಮುನಿರತ್ನಗೆ ಹೈಕೋರ್ಟ್​ನಿಂದ ಶಾಕ್

ನಕಲಿ ಗುರುತಿನ ಚೀಟಿ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರದ ನೂತನ ಶಾಸಕರಗಿ ಆಯ್ಕೆಯಾಗಿರುವ ಮುನಿರತ್ನ ಅವರಿಗೆ ಹೈಕೋರ್ಟ್ ಶಾಕ್ ನೀಡಿದೆ. 2018ರ ಚುನಾವಣೆಯ ವೇಳೆ ಪತ್ತೆಯಾದ ನಕಲಿ ಗುರುತಿನ ಚೀಟಿಗಳಿಗೆ ಸಂಬಂಧಿಸಿ ಪೋಲೀಸ್ ತನಿಖೆಯ ಪರಿಶೀಲನಾ ವರದಿ ಸಲ್ಲಿಸಲು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ನೇಮಕ ಮಾಡುವಂತೆ ನ್ಯಾಯಾಲಯ ಸೂಚಿಸಿದೆ.

ಆರ್.ಆರ್. ನಗರ ಕ್ಷೇತ್ರ ವ್ಯಾಪ್ತಿಯ ಅಪಾರ್ಟ್ ಮೆಂಟ್ ಒಂದರಲ್ಲಿ ನಕಲಿ ಮತದಾರರ ಗುರುತಿನ ಚೀಟಿ ಪತ್ತೆಯಾದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸಂತೋಷ್ ಕುಮಾರ್ ಮತ್ತು ಆನಂದ್ ಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಎ.ಎಸ್. ಓಕ್ ನೇತೃತ್ವದ ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಸಂಬಂಧಿಸಿದಂತೆ ಜಾಲಹಳ್ಳಿ ಪೊಲೀಸರು ನಡೆಸಿರುವ ತನಿಖೆಯನ್ನು ಪರಿಶೀಲಿಸಲು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರು ನೇಮಿಸಬೇಕು. ತನಿಖೆ ಸರಿಯಾಗಿ ನಡೆದಿದೆಯೇ ಇಲ್ಲವೇ ಎನ್ನುವುದನ್ನು ಎಲ್ಲ ಆಯಾಮಗಳಿಂದ ಅವರು ಪರಿಶೀಲಿಸಬೇಕು. ತನಿಖೆ ನಡೆಸಬಹುದಾದ ಅಂಶಗಳೇನಾದರೂ ಇದ್ದರೆ ಅವುಗಳನ್ನೂ ಗುರುತಿಸಬೇಕು. ಪರಿಶೀಲನಾ ವರದಿಯನ್ನು ಡಿ.15ರೊಳಗೆ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top