fbpx
ಸಮಾಚಾರ

ಉದ್ಯೋಗಾಕಾಂಕ್ಷಿಗಳಿಗೆ ಕಹಿ ಸುದ್ದಿ: KSRTCಯಿಂದ ಅನುಕಂಪ ಆಧಾರಿತ ನೇಮಕಾತಿ ಸ್ಥಗಿತ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅನುಕಂಪ ಆಧಾರಿತ ನೇಮಕಾತಿಯನ್ನು ಸ್ಥಗಿತಗೊಳಿಸಿದೆ. ಕೊರೋನಾದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ಈ ವರ್ಷ ಅನುಕಂಪ ಆಧರಿತ ನೇಮಕಾತಿ ಮಾಡಿಕೊಳ್ಳದಿರಲು ನಿರ್ಧರಿಸಿದೆ.

ಈಗಾಗಲೇ ಕೆಎಸ್‌ಆರ್‌ಟಿಸಿ’ಯ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ಅನುಕಂಪದ ಆಧಾರಿತ ಹುದ್ದೆಗೆ ಅರ್ಜಿ ಸಲ್ಲಿಸಿ ನೇಮಕಾತಿ ಆದೇಶ ಪಡೆಯುವ ನಿರೀಕ್ಷೆಯಲ್ಲಿದ್ದವರಿಗೆ ಇದು ಬೇಸರದ ಸಂಗತಿಯಾಗಿದೆ.

ಕೆಎಸ್‌ಆರ್‌ಟಿಸಿಯ ಅನುಕಂಪದ ಆಧಾರಿತ ನೇಮಕಾತಿ ರದ್ದು ತೀರ್ಮಾನ ಈ ವರ್ಷಕ್ಕೆ ಮಾತ್ರ ಸೀಮಿತವಾಗಿದೆ. ಆದರೆ, ಅನುಕಂಪದ ಆಧಾರದ ನೌಕರಿಗೆ ಸಲ್ಲಿಸುವ ಅರ್ಜಿ ಸ್ವೀಕರಿಸಲಾಗುತ್ತದೆ. ಮುಂದೆ ಕೆಲಸಕ್ಕೆ ತೆಗೆದುಕೊಳ್ಳುವ ಸಂದರ್ಭದಲ್ಲಿ ಅರ್ಜಿಗಳನ್ನು ಪರಿಗಣಿಸಲಿದೆ.

ಏನಿದು ಅನುಕಂಪದ ಆಧಾರಿತ ನೇಮಕಾತಿ?:
ಸೇವಾ ಅವಧಿಯಲ್ಲಿ ನಿಗಮದ ನೌಕರರು ಅಕಾಲಿಕ ಮರಣಕ್ಕೆ ತುತ್ತಾದರೆ, ಅವರ ಕುಟುಂಬದ ಸದಸ್ಯರೊಬ್ಬರಿಗೆ ಅನುಕಂಪದ ಆಧಾರದ ಮೇಲೆ ಅವರ ವಿದ್ಯಾರ್ಹತೆಗೆ ಅನುಗುಣವಾಗಿ ನೌಕರಿ ನೀಡಲಾಗುತ್ತದೆ. ನಿಗಮದಲ್ಲಿ ಖಾಲಿಯಾಗುವ ಹುದ್ದೆಗಳಿಗೆ ಅನುಗುಣವಾಗಿ ಅನುಕಂಪ ಆಧಾರಿತ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top