fbpx
ಸಮಾಚಾರ

ಇಂಡೋ-ಆಸಿಸ್ ಸರಣಿಯಲ್ಲಿ ಟೀಮ್ ಇಂಡಿಯಾಗೆ ‘ರೆಟ್ರೋ ಜರ್ಸಿ’

ಹದಿಮೂರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿ ಮುಕ್ತಾಯಗೊಂಡಿದ್ದು, ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ನ ಕಾವು ಹೆಚ್ಚಾಗಿಲಿದೆ. ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದು, ಕ್ರಿಕೆಟ್‌ ಅಭಿಮಾನಿಗಳ ಚಿತ್ತ ಈಗ ಕಾಂಗರೂ ನಾಡಿನ ಕಡೆಗೆ ನೆಲೆಸಿದೆ.

ಟೀಮ್‌ ಇಂಡಿಯಾ ಇದೀಗ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡು ಅಗತ್ಯದ 14 ದಿನಗಳ ಕ್ವಾರಂಟೈನ್‌ ಮುಗಿಸಿದ ಬಳಿಕ ನವೆಂಬರ್‌ 27ರಿಂದ ಮೊದಲಿಗೆ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆತಿಥೇಯರ ಸವಾಲು ಎದುರಿಸಲಿದೆ. ಬಳಿಕ ಅಷ್ಟೇ ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿ ನಡೆಯಲಿದ್ದು, ನಂತರ ಬಾರ್ಡರ್‌-ಗವಾಸ್ಕರ್‌ ಟ್ರೋಫಿ ಸಲುವಾಗಿ ನಡೆಯಲಿರುವ 4 ಪಂದ್ಯಗಳ ಟೆಸ್ಟ್‌ ಸರಣಿ ಡಿ.17ರಂದು ಅಡಿಲೇಡ್‌ನಲ್ಲಿ ಡೇ-ನೈಟ್‌ ಟೆಸ್ಟ್‌ನೊಂದಿಗೆ ಆರಂಭವಾಗಲಿದೆ.

ಅಂದಹಾಗೆ ಈ ದ್ವಿಪಕ್ಷೀಯ ಸರಣಿಯ ಎಲ್ಲಾ ಪಂದ್ಯಗಳನ್ನು ಬಯೋ ಸೆಕ್ಯೂರ್‌ ವಾತಾವರಣದ ಅಡಿಯಲ್ಲೇ ಆಯೋಜಿಸಲಾಗುತ್ತದೆ. ಈ ಹೈವೋಲ್ಟೇಜ್‌ ಸರಣಿಯ ಕಾತುರ ಹೆಚ್ಚಾಗುತ್ತಿರುವ ವೇಳೆ ಟೀಮ್ ಇಂಡಿಯಾ ಆಟಗಾರರು ಟಿ20 ಮತ್ತು ಏಕದಿನ ಪಂದ್ಯಗಳಲ್ಲಿ ವಿಶೇಷ ಸಮವಸ್ತ್ರ ಧರಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಔಟ್‌ಲುಕ್ ಪತ್ರಿಕೆಯ ವರದಿಯ ಪ್ರಕಾರ ಭಾರತೀಯ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ರೆಟ್ರೋ ಜರ್ಸಿಯಲ್ಲಿ ಕಾಣಿಸಿಕೊಳ್ಳಲಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆ 70-80ರ ದಶಕದಲ್ಲಿ ಟೀಮ್ ಇಂಡಿಯಾ ಹೊಂದಿದ್ದ ಕಡು ನೀಲಿ ಬಣ್ಣದ ಜರ್ಸಿಯಲ್ಲಿ ಭಾರತೀಯ ಕ್ರಿಕೆಟ್ ಆಟಗಾರರು ಮಿಂಚಲಿದ್ದಾರೆ ಎನ್ನಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top