fbpx
ಸಮಾಚಾರ

ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟದಲ್ಲಿ ನೇಮಕಾತಿ: 297 ಹುದ್ದೆಗಳಿಗೆ ಅರ್ಜಿ ಅಹ್ವಾನ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ 297 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿವಿಧ ನಮೂನೆಯಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಫೆಬ್ರವರಿ 03, 2021ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆ ಹೆಸರು:
ಸಹಾಯಕ ಮ್ಯಾನೇಜರ್, ಕೃಷಿ ಅಧಿಕಾರಿ ಹಾಗೂ ಇತರೆ ಹುದ್ದೆಗಳು.

ವಿದ್ಯಾರ್ಹತೆ
ಹುದ್ದೆಗಳಿಗೆ ಅನುಗುಣವಾಗಿ ಪಿಯುಸಿ / ಪದವಿ / ಸ್ನಾತಕೋತ್ತರ ಪದವಿ / ಐಟಿಐ / ಇಂಜಿನಿಯರಿಂಗ್ ಪದವಿ ಪಾಸ್‌ ಮಾಡಿರಬೇಕು.

ವಯೋಮಿತಿ
ಕನಿಷ್ಠ 18 ವರ್ಷ ವಯಸ್ಸು ಆಗಿರಬೇಕು.
ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ.
2A, 2B, 3A, 3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಕೆ ಹೇಗೆ?
ಮೇಲಿನ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಜಾಲ ತಾಣ www.bamulnandini.coop ಗೆ ಭೇಟಿ ನೀಡಿ, ಅಗತ್ಯ ಮಾಹಿತಿಗಳು ಮತ್ತು ಅಗತ್ಯ ದಾಖಲೆಗಳ ಸಾಫ್ಟ್‌ಕಾಪಿ ಅಪ್‌ಲೋಡ್‌ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top