fbpx
ಸಮಾಚಾರ

ಭಗವಾನ್ ಮುಖಕ್ಕೆ ಮಸಿ: ತೀವ್ರವಾಗಿ ಖಂಡಿಸಿದ ಸಿದ್ದರಾಮಯ್ಯ

ಸಾಹಿತಿ ಪ್ರೊ. ಕೆ.ಎಸ್ ಭಗವಾನ್ ಅವರ ಮುಖಕ್ಕೆ ಗುರುವಾರ ವಕೀಲರೊಬ್ಬರು ಕೋರ್ಟ್ ಆವರಣದಲ್ಲಿ ಮಸಿ ಬಳಿದಿರುವ ಕೃತ್ಯವನ್ನು ಪ್ರತಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.

 

 

ಟ್ವೀಟ್ ಮೂಲಕ ತಮ್ಮ ಬೇಸರ ವ್ಯಕ್ತಪಡಿಸಿರುವ ಅವರು, ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಮುಖಕ್ಕೆ ವಕೀಲೆಯೊಬ್ಬರು ಮಸಿ ಬಳಿದ ದುಷ್ಕೃತ್ಯ ಖಂಡನೀಯ. ಸೈದ್ಧಾಂತಿಕ ಭಿನ್ನಾಭಿಪ್ರಾಯವನ್ನು ಚರ್ಚೆ-ಸಂವಾದದ ಮೂಲಕ ಬಗೆಹರಿಸಿಕೊಳ್ಳಬೇಕೇ ವಿನಃ ಈ ರೀತಿಯ ಅಸಭ್ಯ ನಡವಳಿಕೆ ಮೂಲಕ ಅಲ್ಲ. ಪೊಲೀಸರು ತಕ್ಷಣ ವಕೀಲೆ ವಿರುದ್ಧ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನ ಆಗ್ರಹಿಸಿದ್ದಾರೆ.

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನೆಲೆ ವಿಚಾರಣೆಗಾಗಿ ಸಾಹಿತಿ ಭಗವಾನ್ ಗುರುವಾರ ಬೆಂಗಳೂರಿನ ಎರಡನೇ ಎಸಿಎಂಎಂ ನ್ಯಾಯಾಲಯಕ್ಕೆ ಆಗಮಿಸಿದ್ದರು. ಈ ಸಂದರ್ಭ ವಕೀಲೆ ಮೀರಾ ರಾಘವೇಂದ್ರ ಎಂಬುವವರು ಭಗವಾನ್ ಮುಖಕ್ಕೆ ಮಸಿ ಬಳಿದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top