fbpx
ಸಮಾಚಾರ

RCB ತಂಡದಲ್ಲಿ ಮಹತ್ವದ ಬದಲಾವಣೆ; ತಂಡ ಸೇರಿಕೊಂಡಿದ್ದು ಯಾರು?

ಐಪಿಎಲ್ 2021ಕ್ಕೆ ಸಿದ್ಧತೆ ಆರಂಭಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಬ್ಯಾಟಿಂಗ್ ಸಲಹೆಗಾರರಾಗಿ ಸಂಜಯ್ ಬಂಗಾರ್ ಅವರನ್ನು ನೇಮಕ ಮಾಡಿದೆ. 2021ರ ಐಪಿಎಲ್‌ ಟೂರ್ನಿಗಾಗಿ ಸಿದ್ಧತೆ ನಡೆಸುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಕೋಚಿಂಗ್ ಸಿಬ್ಬಂದಿಗಳಲ್ಲಿ ಬದಲಾವಣೆಗೆ ಮುಂದಾಗಿದ್ದು, ಅದರಂತೆ ಇಂದು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸಂಜಯ್ ಬಂಗಾರ್ ಅವರನ್ನು ತಂಡದ ಬ್ಯಾಟಿಂಗ್ ಸಲಹೆಗಾರರಾಗಿ ನೇಮಕ ಮಾಡಿದೆ.

 

 

ಸಂಜಯ್ ಬಂಗಾರ್ ಬ್ಯಾಟಿಂಗ್‌ ಸಲಹೆಗಾರರಾಗಿ ಆಯ್ಕೆಯಾಗಿರುವ ವಿಚಾರವನ್ನು ಆರ್‌ಸಿಬಿ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಾಕಿಕೊಂಡಿದೆ. ‘ಬ್ಯಾಟಿಂಗ್‌ ಸಲಹೆಗಾರರಾಗಿ ಸಂಜಯ್ ಬಂಗಾರ್ ಅವರನ್ನು ಆರ್‌ಸಿಬಿ ಕುಟುಂಬಕ್ಕೆ ಬರ ಮಾಡಿಕೊಳ್ಳಲು ನಮಗೆ ಸಂತಸವಾಗುತ್ತಿದೆ,’ ಎಂದು ಟ್ವೀಟ್‌ನಲ್ಲಿ ಬರೆದುಕೊಳ್ಳಲಾಗಿದೆ.

2014ನೇ ಸಾಲಿನಲ್ಲಿ ಭಾರತ ಕ್ರಿಕೆಟ್ ತಂಡದ ಬ್ಯಾಟಿಂಗ್ ಕೋಚ್ ಆಗಿ ನೇಮಕಗೊಂಡಿದ್ದ ಸಂಜಯ್ ಬಂಗಾರ್, 2019ರ ವರೆಗೆ ಸುದೀರ್ಘ ಐದು ವರ್ಷಗಳಷ್ಟು ಕಾಲ ಸೇವೆ ಸಲ್ಲಿಸಿದ್ದರು. ಬಳಿಕ ಅವರ ಸ್ಥಾನಕ್ಕೆ ವಿಕ್ರಂ ರಾಥೋಡ್ ಆಯ್ಕೆಯಾಗಿದ್ದರು. ಐಪಿಎಲ್‌ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸಹಾಯಕ ಕೋಚ್ ಆಗಿಯೂ ಬಂಗಾರ್ ಹೆಚ್ಚಿನ ಯಶಸ್ಸು ಗಳಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top