fbpx
ಸಮಾಚಾರ

ಕರ್ನಾಟಕ ರಾಜ್ಯ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗ(KSCDRC) ನೇಮಕಾತಿ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗ (KSCDRC)2021ನೇ ಸಾಲಿನ ನೇಮಕಾತಿ ಬಗ್ಗೆ ಅಧಿಸೂಚನೆ ಹೊರಡಿಸಿದ್ದು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಿದೆ. ಅಧ್ಯಕ್ಷ, ಸದಸ್ಯ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 30ರೊಳಗೆ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆ: 56

ವಿದ್ಯಾರ್ಹತೆ:
ಪದವಿ, ನೋಟಿಫಿಕೇಷನ್‌ನಲ್ಲಿ ನೀಡಿರುವಂತೆ 10 ವರ್ಷಗಳ ಅನುಭವ.

ಸಂಬಳ ವಿವರ:
15000/ ಪ್ರತಿ ತಿಂಗಳು.

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ 250 ರೂ. ನಿಗದಿ ಮಾಡಲಾಗಿದೆ.

ನೇಮಕಾತಿ ವಿಧಾನ:
ವಸ್ತುನಿಷ್ಠೆ ಮಾದರಿಯ ಪರೀಕ್ಷೆ, ಮೌಖಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://kscdrc.kar.nic.in/index_kan.htm ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 30,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ಬಗ್ಗೆ ಹೆಚ್ಚಿನ ವಿವರಕ್ಕಾಗಿ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top