fbpx
ಸಮಾಚಾರ

RDPR ನೇಮಕಾತಿ: 154 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 2021ರ ಸಾಲಿನ ನೇಮಕಾತಿಯನ್ನು ಆರಂಭಿಸಿದೆ. ಒಟ್ಟು 154 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 28,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೋಸ್ಟ್ ಗ್ರಾಜುಯೇಟ್, ಪದವಿ, ಎಂಸಿಎ, ಎಂ.ಟೆಕ್, ಬಿ.ಇ, ಎಂ.ಎಸ್ಸಿ, ಎಂಎಸ್‌ಡಬ್ಲ್ಯೂ ಮತ್ತು ಎಂ.ಎ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:
ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:
ಹುದ್ದೆಗಳಿಗೆ ಅನುಸಾರವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ 17,000/- ರಿಂದ 1,50,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:
ನೇರ ಸಂದರ್ಶನ ಅಥವಾ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:
ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://rdpr.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಅರ್ಜಿಯನ್ನು ಕಳುಹಿಸಬೇಕಾದ ವಿಳಾಸ:
ಆಯುಕ್ತರು,
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ,
2 ನೇ ಮಹಡಿ, ಕೆಎಚ್‌ಬಿ ಸಂಕೀರ್ಣ,
ಕಾವೇರಿ ಭವನ,
ಕೆ.ಜಿ .. ರಸ್ತೆ,
ಬೆಂಗಳೂರು -560 009.

ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top