fbpx
ಸಮಾಚಾರ

” 18 ವರ್ಷ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಳ್ಳಲು ಆಸ್ಪತ್ರೆ ಬಳಿ ಬರ್ಬೇಡಿ” ಸುಧಾಕರ್ ಮನವಿ

ಮೇ 1 ರಿಂದ 18 ವರ್ಷದಿಂದ 44 ವರ್ಷದ ಜನರು ಕೋವಿಡ್‌ ಲಸಿಕೆ ಪಡೆದುಕೊಳ್ಳಬಹುದು ಎಂದು ಸರ್ಕಾರ ತಿಳಿಸಿತ್ತು. ಈ ಕುರಿತಾಗಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಆದರೆ ಸದ್ಯ ನೋಂದಣಿ ಮಾಡಿಕೊಂಡವರು ಆಸ್ಪತ್ರೆಗೆ ಅಥವಾ ಲಸಿಕಾ ಕೇಂದ್ರಕ್ಕೆ ಬರಬೇಡಿ ಎಂದು ಸರ್ಕಾರ ಸೂಚನೆ ನೀಡಿದೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ತೀರ್ಮಾನಿಸಲಾಗಿತ್ತು. ಅದರ ಅನ್ವಯ 3- 3.5 ಕೋಟಿ ಜನ ಕರ್ನಾಟಕದಲ್ಲಿ ಇದ್ದಾರೆ ಎಂದು ಅಂದಾಜಿಸಲಾಗಿದೆ. 1 ಕೋಟಿ ಕೋವಿ ಶೀಲ್ಡ್ ಗೆ 400 ಕೋಟಿ ಕೊಟ್ಟು ಆರ್ಡರ್ ಮಾಡಿದ್ದೇವೆ. 28ನೇ ತಾರಿಕಿನಿಂದ ನೊಂದಣಿ ಆರಂಭವಾಗಿದೆ, ನೋಂದಣಿ ಮಾಡಿಕೊಳ್ಳಿ ಎಂದು ಹೇಳಿದರು.

ಮೇ ಒಂದರಿಂದ ಆರಂಭವಾಗಬೇಕಿದ್ದ ಲಸಿಕೆ ಆರಂಭವಾಗಲ್ಲ. ಕಂಪೆನಿಗಳು ಯಾವಾಗ ಕೊಡುತ್ತೆ ಅಂತ ಇದುವರೆಗೆ ನಮಗೆ ಮಾಹಿತಿ ಬಂದಿಲ್ಲ. ನಾಳೆಯಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಳ್ಳಲು ಆಸ್ಪತ್ರೆ ಬಳಿ ಬರಬಾರದು ಅಂತ ಮನವಿ ಮಾಡುತ್ತೇನೆ. ಮುಂದಿನ ದಿನಾಂಕವನ್ನ ಅಧಿಕೃತವಾಗಿ ತಿಳಿಸುತ್ತೇವೆ. ಕಂಪೆನಿಯವರು ಅಧಿಕೃತ ಮಾಹಿತಿ ಹಂಚಿಕೊಂಡ ನಂತರ ಲಸಿಕೆ ಯಾವ ವಾರದಿಂದ ಸಿಗುತ್ತೆ ಅಂತ ಹೇಳಬಹುದು. ಅದರ ಬಗ್ಗೆ ಪ್ರಡಿಕ್ಟ್ ಮಾಡೋಕೆ ಹೋಗಲ್ಲ ಎಂದರು.

18 ವರ್ಷದಿಂದ 44 ವರ್ಷದೊಳಗಿನವರಿಗೆ ರಾಜ್ಯದ ಜನತೆಗೆ ಸರ್ಕಾರ ಉಚಿತವಾಗಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ನೀಡುವುದು ಖಂಡಿತ. ಇದರಲ್ಲಿ ಯಾವುದೇ ಗೊಂದಲ ಬೇಡ. ಕೋವಿಡ್ ಪೋರ್ಟಲ್ ನಲ್ಲಿ ಹೆಸರು ನೋಂದಾಯಿಸಿಕೊಳ್ಳುವ ಪ್ರಕ್ರಿಯೆ ಮುಂದುವರಿಸಬಹುದು, ಅದೇ ರೀತಿ 45 ವರ್ಷ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಳ್ಳದವರು ಆಸ್ಪತ್ರೆಗಳಿಗೆ ಹೋಗಿ ಲಸಿಕೆ ಹಾಕಿಸಿಕೊಳ್ಳಿ ಎಂದು ಸಹ ಸಚಿವರು ಮನವಿ ಮಾಡಿಕೊಂಡರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top