fbpx
ಸಮಾಚಾರ

ಬ್ರೇಕಿಂಗ್ ನ್ಯೂಸ್: ಬಿಗ್‌ಬಾಸ್‌ ಸೀಸನ್ 8 ಅರ್ಧಕ್ಕೆ ಕ್ಯಾನ್ಸಲ್; ನಾಳೆಯೇ ಕೊನೆ

ಬಿಗ್ ಬಾಸ್ ಸೀಸನ್ 8 ನಾಳೆಗೆ ಅಂತ್ಯವಾಗಲಿದೆ. ಈ ವಿಚಾರವನ್ನು ಬಿಗ್ ಬಾಸ್ ಪ್ರಸಾರವಾಗುವ ಕಲರ್ಸ್ ಕನ್ನಡ ಚಾನೆಲ್ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಖಚಿತಪಡಿಸಿದ್ದಾರೆ. ತಮ್ಮ ಫೇಸ್‍ಬುಕ್‍ನಲ್ಲಿ ಈ ವಿಷಯ ಹಂಚಿಕೊಂಡಿರುವ ಅವರು ಯಾಕೆ ಈ ಶೋವನ್ನು ಅರ್ಧದಲ್ಲೇ ನಿಲ್ಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

 

 

ಕಳೆದ 71 ದಿನಗಳಿಂದ ಬಿಗ್​ ಬಾಸ್​ನ ಎಂಟನೇ ಸೀಸನ್​ ಪ್ರಸಾರವಾಗುತ್ತಿದ್ದು, ಸದ್ಯ 11 ಸ್ಪರ್ಧಿಗಳು ಮನೆಯಲ್ಲಿದ್ದಾರೆ. ಇದೀಗ ಲಾಕ್​ಡೌನ್​ ಘೋಷಣೆಯಾಗಿರುವುದರಿಂದ, ಸೋಮವಾರದಿಂದ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗುತ್ತಿದೆ. ಭಾನುವಾರ ಪ್ರಸಾರವಾಗುವ ಕಂತು ಕೊನೆಯ ಕಂತಾಗಲಿದ್ದು, ಆ ನಂತರ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗುತ್ತಿದೆ .

ಈ ಕುರಿತು ಇನ್‌ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿರುವ ಕಲರ್ಸ್ ಕನ್ನಡ ಕ್ಲಸ್ಟರ್ ಹೆಡ್ ಹಾಗೂ ಬಿಗ್ ಬಾಸ್ ಶೋನ ನಿರ್ದೇಶಕ ಪರಮೇಶ್ವರ ಗುಂಡ್ಕಲ್, ‘ಬಿಗ್ ಬಾಸ್ ಶುರುವಾಗಿ ಇವತ್ತಿಗೆ (ಮೇ 8) ಎಪ್ಪತ್ತೊಂದನೇ ದಿನ. ಹೊರಗಡೆ ಎದುರಾಗಿರುವ ಕಷ್ಟದ ಸವಾಲು ಗೊತ್ತಿಲ್ಲದೇ ಒಳಗಡೆ ಇರುವವರೆಲ್ಲಾ ಖುಷಿಯಾಗಿದ್ದಾರೆ. ಐಸೊಲೇಷನ್‌ನಲ್ಲಿ ಇರುವುದರಿಂದ ಅವರೆಲ್ಲರೂ ಸುರಕ್ಷಿತವಾಗಿಯೂ ಇದ್ದಾರೆ. ಎಲ್ಲರಿಗೂ ಹೊರಗಡೆ ಆಗಿರುವ ಬೆಳವಣಿಗೆ ತಿಳಿಸಿ ನಾಳೆ ಹೊರಗಡೆ ಕರೆಯುತ್ತಿದ್ದೇವೆ. ಅನಂತರ ಅವರನ್ನು ಮತ್ತು ತಂಡವನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲು ವ್ಯವಸ್ಥೆ ಆಗುತ್ತಿದೆ’

‘ನೂರಾರು ದಿನಗಳ ಕೆಲಸ. ನೂರಾರು ಜನರ ಕೆಲಸ. ಎಲ್ಲವನ್ನೂ ಪಕ್ಕಕ್ಕಿಟ್ಟು ಶ್ರದ್ಧೆಯಿಂದ ಕೆಲಸ ಮಾಡಿದ ಒಂದು ತಂಡದ ಕನಸು ಅರ್ಧಕ್ಕೇ ನಿಂತಿದೆ. ಕಷ್ಟದ ತೀರ್ಮಾನವಾದರೂ ಸಮಾಧಾನ ಕೊಟ್ಟ ತೀರ್ಮಾನ. ಮನಸ್ಸು ಭಾರವಾಗಿದೆ. ಈ ಶೋ ನಿಲ್ಲುತ್ತಿದೆ ಅಂತಲ್ಲ. ಹೊರಗಡೆ ಗಾಳಿಯಲ್ಲಿ ಓಡಾಡುತ್ತಿರುವ ಕಣ್ಣಿಗೆ ಕಾಣದ ಅನಿಶ್ಚಿತತೆಯಿಂದ ಇನ್ನಿಲ್ಲದ ಕಳವಳ. ಎಲ್ಲರಿಗೂ ಈ ಕಳವಳಕ್ಕೊಂದು ಉತ್ತರ ಬೇಗ ಸಿಗಲಿ. ಸುರಕ್ಷಿತವಾಗಿರಿ’ ಎಂದು ಪರಮೇಶ್ವರ ಗುಂಡ್ಕಲ್‌ ಉಲ್ಲೇಖಿಸಿದ್ದಾರೆ

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top