fbpx
ಸಮಾಚಾರ

ರಾಬರ್ಟ್ ಸಿನಿಮಾ ನಿರ್ಮಾಪಕನ ಕೊಲೆಗೆ ಯತ್ನ- ಪ್ರಮುಖ ಆರೋಪಿಯ ಬಂಧನ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಕೊಲೆಗೆ ಸ್ಕೆಚ್ ಹಾಕಿದ್ದ ಪ್ರಕರಣ ಸಂಬಂಧ ಮತ್ತೊಬ್ಬ ಕಿಂಗ್ ಪಿನ್ ರಾಜೇಶ್ ಅಲಿಯಾಸ್ ಕರಿಯನನ್ನ ಬೆಂಗಳೂರಿನ ಕೆಂಪೇಗೌಡ ನಗರ ಪೊಲೀಸರು ಬಂಧಿಸಿದ್ದಾರೆ.

 

 

ಉಮಾಪತಿ ಮತ್ತು ಅವರ ಸಹೋದರ ದೀಪಕ್‌ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು. ಈ ವಿಚಾರವಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಹತ್ಯೆಗೆ ಸ್ಕೆಚ್ ಹಾಕಿರುವುದರ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣವೇ ಏಳು ಆರೋಪಿಗಳನ್ನು ಬಂಧಿಸಿದ್ದರು. ಬೆಂಗಳೂರಿನ ಹೊರಗಿದ್ದುಕೊಂಡು ಉದ್ಯಮಿಗಳಿಗೆ ಕೊಲೆ ಬೆದರಿಕೆ ಹಾಕುವುದು, ಹಣ ವಸೂಲಿ ಮಾಡುವುದು, ದರೋಡೆ ಮಾಡುವುದು ಈ ಗ್ಯಾಂಗ್‌ನ ಕೆಲಸವಾಗಿತ್ತು. ಆದರೆ ಈ ಗ್ಯಾಂಗ್ ನ ಮುಖ್ಯಸ್ಥ, ಪ್ರಮುಖ ಆರೋಪಿ ಮಾತ್ರ ತಲೆ ಮರೆಸಿಕೊಂಡಿದ್ದರು.

ಜಯನಗರ ಪೊಲೀಸರು ‘ಆಪರೇ‍ನ್ ಬ್ಲಾಕ್ ಡಾಗ್’ ಎಂಬ ಹೆಸರಿನಲ್ಲಿ ಆರೋಪಿಯ ಪತ್ತೆಗೆ ಶೋಧ ನಡೆಸಿದ್ದರು. ಈ ವೇಳೆ ರೌಡಿ ಶೀಟರ್ ರಾಜೇಶ್ ಅಲಿಯಾಸ್ ಕರಿಯಾ ರಾಜೇಶ್‌ ಅವರನ್ನು ಬಂಧಿಸಿದ್ದಾರೆ. ರಾಜೇಶ್ ಅಲಿಯಾಸ್ ಕರಿಯ ರಾಜೇಶ್ ಎಂಬಾತ ಬಾಂಬೆ ರವಿ ಸಹಚರನಾಗಿದ್ದು, ನೇಪಾಳದಲ್ಲಿ ತಲೆಮರೆಸಿಕೊಂಡಿದ್ದ. ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top